ಬೆಂಗಳೂರು : ರಾಜ್ಯ ಸರ್ಕಾರವು ಮತ್ತೆ ಪಡಿತರ ಚೀಟಿ ( ಬಿಪಿಎಲ್) ಹೊಸ ಸದಸ್ಯರ ಹೆಸರು ಸೇರ್ಪಡೆ/ತಿದ್ದುಪಡಿಗೆ ಅವಕಾಶ ನೀಡಿದ್ದು, ಸರ್ಕಾರದ ವೆಬ್ ಸೈಟ್ ನಲ್ಲಿ ಹೆಸರು ಸೇರ್ಪಡೆ/ತಿದ್ದುಪಡಿ ಮಾಡಬಹುದಾಗಿದೆ.
ಅಕ್ಟೋಬರ್ 5 ರ ಇಂದಿನಿಂದ ಅಕ್ಟೋಬರ್ 7 ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರದಲ್ಲಿ 3 ದಿನ ಬೆಳಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆವರೆಗೆ ತಿದ್ದುಪಡಿಗೆ ಅವಕಾಶ ನೀಡಲಾಗಿದೆ.ಬೆಂಗಳೂರು ಒನ್, ಕರ್ನಾಟಕ ಒನ್ , ಗ್ರಾಮ ಒನ್ ಕೇಂದ್ರದಲ್ಲಿ ಜನರು BPL ಕಾರ್ಡ್ ಹೆಸರು ಸೇರ್ಪಡೆ, ತಿದ್ದುಪಡಿ ಮಾಡಿಸಬಹುದು.2 ನೇ ಹಂತದಲ್ಲಿ ಬೆಳಗಾವಿ, ಬಾಗಲಕೋಟೆ, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಧಾರವಾಡ, ಹಾಸನ, ಗದಗ, ಕಾವೇರಿ, ಕೊಡಗು , ಮೈಸೂರು, ಉಡುಪಿ, ಉತ್ತರ ಕನ್ನಡ, ವಿಜಯಪುರ ಜಿಲ್ಲೆಯಲ್ಲಿ ಅವಕಾಶ ನೀಡಲಾಗುತ್ತಿದೆ ಎಂದು ತಿಳಿದು ಬಂದಿದೆ.
ರೇಷನ್ ಕಾರ್ಡ್ ಅಪ್ ಡೇಟ್ ಮಾಡಲು ಏನೆಲ್ಲಾ ದಾಖಲೆಗಳು ಬೇಕು..?
ಕಾರ್ಡ್ ನಲ್ಲಿ ಹೆಸರು ಸೇರ್ಪಡೆಗೆ ಆಧಾರ್ ನೊಂದಿಗೆ ಆದಾಯ ಪ್ರಮಾಣ ಪತ್ರ ನೀಡಬೇಕಿದ್ದು, ಆರು ವರ್ಷದೊಳಗಿನ ಮಕ್ಕಳ ಸೇರ್ಪಡೆಗೆ ಮೊಬೈಲ್ ನಂಬರ್ ಜೋಡಣೆಯಾಗಿರುವ ಆಧಾರ ಸಂಖ್ಯೆ ಮತ್ತು ಜನನ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ.
ನಿಮ್ಮ ಪಡಿತರ ಚೀಟಿಯ ಮೂಲ ದಾಖಲೆ ಮತ್ತು ಮಗುವಿನ ಜನನ ಪ್ರಮಾಣಪತ್ರ ಜೊತೆಗೆ ಮಗುವಿನ ಪೋಷಕರ ಆಧಾರ್ ಕಾರ್ಡ್ ಬೇಕಾಗುತ್ತದೆ. ಹೆಂಡತಿಯ ಹೆಸರನ್ನು ಸೇರ್ಪಡೆ ಮಾಡುವಾಗ ಆ ಮಹಿಳೆಯ ಆಧಾರ್ ಮತ್ತು ಗಂಡನ ಮನೆಯ ಪಡಿತರ ಚೀಟಿ ಪ್ರತಿಯನ್ನು ನೀಡಬೇಕಾಗುತ್ತದೆ.
3 ದಿನ ಬೆಳಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆವರೆಗೆ ಬಿಪಿಎಲ್ ಕಾರ್ಡ್ ಹೆಸರು ಸೇರ್ಪಡೆ, ತಿದ್ದುಪಡಿ ಮಾಡಿಸಬಹುದು. ಚಾಲ್ತಿಯಲ್ಲಿರುವ ಪಡಿತರ ಚೀಟಿಗಳಲ್ಲಿ, ಹೆಸರು ಸೇರ್ಪಡೆ/ತೆಗೆಯುವುದು, ವಿಳಾಸ ಬದಲಾವಣೆ, ಸದಸ್ಯರ ಹೆಸರು ತಿದ್ದುಪಡಿಗೆ ಬೆಳಗ್ಗೆ 10ರಿಂದ ರಾತ್ರಿ 8ರವರೆಗೆ ತಂತ್ರಾಂಶದಲ್ಲಿ ಅವಕಾಶ ಕಲ್ಪಿಸಿದ್ದು, ನಿಗದಿಪಡಿಸಿದ ಅವಧಿಯೊಳಗೆ ಕರ್ನಾಟಕ ಒನ್, ಗ್ರಾಮ ಒನ್ ಮತ್ತು ಸೇವಾ ಸಿಂಧು ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಪ್ರಕಟಣೆ ತಿಳಿಸಿದೆ.