alex Certify ಗಮನಿಸಿ : ಜ.28 ರಂದು ‘ಕಾನ್ಸ್ ಟೇಬಲ್’ ಹುದ್ದೆಗಳಿಗೆ ಲಿಖಿತ ಪರೀಕ್ಷೆ, ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗಮನಿಸಿ : ಜ.28 ರಂದು ‘ಕಾನ್ಸ್ ಟೇಬಲ್’ ಹುದ್ದೆಗಳಿಗೆ ಲಿಖಿತ ಪರೀಕ್ಷೆ, ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ (ಸಿಎಆರ್ ಮತ್ತು ಡಿಎಆರ್) (ಪುರುಷ ಮತ್ತು ತೃತೀಯ ಲಿಂಗ ಪುರುಷ) 3064 ಹುದ್ದೆಗಳಿಗೆ ಲಿಖಿತ ಪರೀಕ್ಷೆಯು ಜನವರಿ, 28 ರಂದು ಬೆಳಗ್ಗೆ 11 ಗಂಟೆಯಿಂದ 12.30 ಗಂಟೆ ವರೆಗೆ ರಾಜ್ಯಾದ್ಯಂತ ನಡೆಯಲಿದೆ.

ಆದ್ದರಿಂದ ಈ ಲಿಖಿತ ಪರೀಕ್ಷೆಗೆ ಅರ್ಹರಿರುವ ಅಭ್ಯರ್ಥಿಗಳಿಗೆ ಕರೆಪತ್ರದ ಬಗ್ಗೆ ಮುಂಬರುವ ದಿನಗಳಲ್ಲಿ ಎಸ್ಎಂಎಸ್ ಮೂಲಕ ಮಾಹಿತಿಯನ್ನು ನೀಡಲಾಗುವುದು ಹಾಗೂ ಕರೆಪತ್ರದ ಲಿಂಕ್ ಅನ್ನು ಸಹ ಕಳುಹಿಸಲಾಗುವುದು. ಅಭ್ಯರ್ಥಿಗಳು ಕರೆಪತ್ರವನ್ನು ಡೌನ್ಲೋಡ್ ಮಾಡಿಕೊಂಡು ನಿಗದಿಪಡಿಸಿದ ದಿನಾಂಕದಂದು ಲಿಖಿತ ಪರೀಕ್ಷೆಗೆ ಹಾಜರಾಗುವಂತೆ ಬೆಂಗಳೂರು ಡೈರೆಕ್ಟರ್ ಜನರಲ್ ಆಫ್ ಪೊಲೀಸ್, ಎ.ಪಿ.ಸಿ. ನೇಮಕಾತಿ ಸಮಿತಿಯ ಡಿಐಜಿಪಿ ನೇಮಕಾತಿ ಹಾಗೂ ಸಮನ್ವಯಾಧಿಕಾರಿ ಯಡಾ ಮಾರ್ಟನ್ ಮಾರ್ಬನ್ಯಾಂಗ್ ಅವರು ತಿಳಿಸಿದ್ದಾರೆ.

Related News

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...