ಬೆಂಗಳೂರು : ರಾಜ್ಯ ಸರ್ಕಾರದ ಐದನೇ ಗ್ಯಾರಂಟಿ ಯೋಜನೆಯಾದ ಯುವನಿಧಿ ಯೋಜನೆಗೆ ಡಿಸೆಂಬರ್ 26 ರಿಂದ ನೋಂದಣಿ ಶುರುವಾಗಿದ್ದು, ಡಿಪ್ಲೋಮಾ, ಪದವೀಧರರು ಈ ಯೋಜನೆಗೆ ಅರ್ಜಿ ಸಲ್ಲಿಸಬಹುದು.
ಪತ್ರಿ ತಿಂಗಳು 25 ರೊಳಗೆ ಅರ್ಜಿ ಸಲ್ಲಿಸಲು ಅವಕಾಶ ಇದ್ದು, ಸೇವಾ ಸಿಂಧುವಿನಲ್ಲಿ ಅರ್ಜಿ ಸಲ್ಲಿಸಬಹುದು. ಕರ್ನಾಟಕ ಓನ್, ಬಾಪೂಜಿ ಸೇವಾ ಕೇಂದ್ರ, ಗ್ರಾಮ ಓನ್ ಕೇಂದ್ರಗಳಲ್ಲಿಯೂ ಅರ್ಜಿ ಸಲ್ಲಿಸಬಹುದು.
ಒಂದು ವೇಳೆ ಸುಳ್ಳು ಮಾಹಿತಿ ನೀಡಿ ಅರ್ಜಿ ಹಾಕಿದರೆ ಅಥವಾ ಉದ್ಯೋಗ ಸಿಕ್ಕ ಮೇಲೆಯೂ ಇಲ್ಲವೇ ಉದ್ಯೋಗದಲ್ಲಿದ್ದೂ ಅರ್ಜಿ ಹಾಕಿ ಹಣ ಪಡೆದಿದ್ದು ಸಾಬೀತಾದರೆ ಅಂಥವರ ಮೇಲೆ ಕಠಿಣ ಕ್ರಮವನ್ನು ಕೈಗೊಳ್ಳಲಾಗುವುದು. ಹಾಗೂ ಅವರು ಪಡೆದ ಅಷ್ಟೂ ಹಣವನ್ನು ವಾಪಸ್ ಪಡೆಯಲಾಗುವುದು ಎಂದು ಸರ್ಕಾರ ಎಚ್ಚರಿಕೆ ನೀಡಿದೆ. ಸೋ..ಬೀ..ಕೇರ್ ಫುಲ್.
ಯುವನಿಧಿ ದುರುಪಯೋಗ ತಡೆಯುವ ಉದ್ದೇಶದಿಂದ ಈ ಕ್ರಮವನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಸರ್ಕಾರ ಸ್ಪಷ್ಟಪಡಿಸಿದೆ.ಜನವರಿ 12ರಂದು ಫಲಾನುಭವಿಗಳ ಖಾತೆಗೆ ನೇರವಾಗಿ ಹಣ ಜಮೆ ಆಗಲಿದ್ದು, ಶಿವಮೊಗ್ಗದಲ್ಲಿ ಈ ಕಾರ್ಯಕ್ರಮ ನಡೆಯಲಿದೆ.
ಅರ್ಜಿ ಸಲ್ಲಿಕೆಗೆ ಅರ್ಹತೆಗಳು
1) 2023ರಲ್ಲಿ ಪದವಿ/ಡಿಪ್ಲೋಮಾ ಉತ್ತೀರ್ಣರಾದ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.
2) ಪದವಿ/ಡಿಪ್ಲೋಮಾ ನಂತರ ಕನಿಷ್ಠ 6 ತಿಂಗಳ ಅವಧಿಯವರೆಗೆ ಸರ್ಕಾರಿ/ ಖಾಸಗಿ ಉದ್ಯೋಗ ಹೊಂದಿಲ್ಲದವರು ಅರ್ಜಿ ಸಲ್ಲಿಸಬಹುದಾಗಿದೆ.
3) ಸ್ವಯಂ ಉದ್ಯೋಗ ಹೊಂದಿಲ್ಲದವರು
4) ಉನ್ನತ ವಿದ್ಯಾಭ್ಯಾಸ ಮುಂದುವರಿಸದೇ ಇರುವವರು
5) ಕರ್ನಾಟಕದಲ್ಲಿ ವಾಸವಿರುವವರು (ಕನಿಷ್ಠ 6 ವರ್ಷಗಳವರೆಗೆ ಪದವಿ/ಡಿಪ್ಲೋಮಾದವರೆಗೆ ಅಧ್ಯಯನ ಮಾಡಿದವರು)
6) ನೋಂದಣಿಗೆ ಅಗತ್ಯವಿರುವ ದಾಖಲಾತಿಗಳು- ಎಸ್.ಎಸ್.ಎಲ್.ಸಿ. ಪಿಯುಸಿ, ಪದವಿ/ ಡಿಪ್ಲೋಮಾ ಪ್ರಮಾಣ ಪತ್ರ ಅಗತ್ಯವಾಗಿದೆ.
7) ನೋಂದಾಯಿಸಿಕೊಳ್ಳಲು ಸೇವಾ ಸಿಂಧು ಪೋರ್ಟಲ್ ಗೆ ಭೇಟಿ ನೀಡಬಹುದು. ಯುವನಿಧಿಗೆ ಅರ್ಜಿ ಸಲ್ಲಿಸಲು ಬಯಸುವವರು ಸ್ಕ್ಯಾನ್ ಮಾಡುವ ಮೂಲಕ ನೋಂದಣಿ ಮಾಡಿಕೊಳ್ಳಬಹುದು. ಅಥವಾ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಗೆ ಭೇಟಿ ನೀಡಬೇಕಾಗುತ್ತದೆ.