ಬೆಂಗಳೂರು : ಆರ್ ಟಿ ಒ ಶಾಲೆಗಳ ಮ್ಯಾಪಿಂಗ್ ಗೆ ಸೂಚನೆ ನೀಡಲಾಗಿದ್ದು, ಮಾ.22 ರಿಂದ ಏ.22 ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಶಿಕ್ಷಣ ಹಕ್ಕು ಕಾಯ್ದೆಯಡಿ (ಆರ್ಟಿಇ) 2024-25ನೇ ಸಾಲಿನ ದಾಖಲಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಶಾಲೆಗಳ ಮ್ಯಾಪಿಂಗ್ ಮಾಡುವಂತೆ ಡಿಡಿಪಿಐ ಮತ್ತು ಬಿಇಒಗಳಿಗೆ ಶಾಲಾ ಶಿಕ್ಷಣ ಇಲಾಖೆಯು ಸೂಚಿಸಿದೆ. ಮಾರ್ಚ್ 22 ರಿಂದ ಏಪ್ರಿಲ್ 22ರವರೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ, ಏಪ್ರಿಲ್ 30ರಂದು ಮೊದಲ ಸುತ್ತಿನ ಸೀಟು ಹಂಚಿಕೆ ನಡೆಯಲಿದೆ ಎಂದು ಸರ್ಕಾರ ಪ್ರಕಟಣೆ ಹೊರಡಿಸಿದೆ.