ಶಿರಸಿ: ವಿಧಾನಸಭೆ ಅಧಿವೇಶನಕ್ಕೆ ಗೈರು ಹಾಜರಾದ ಹಿನ್ನಲೆಯಲ್ಲಿ ಶಾಸಕರಾದ ಕೆ.ಎಸ್. ಈಶ್ವರಪ್ಪ ಮತ್ತು ರಮೇಶ್ ಜಾರಕಿಹೊಳಿ ಅವರಿಗೆ ಕಾರಣ ಕೇಳಿ ನೋಟಿಸ್ ನೀಡಲಾಗಿದೆ.
ಸೂಕ್ತ ಕಾರಣ ನೀಡದೆ, ಅನುಮತಿ ಪಡೆಯದೆ ಅಧಿವೇಶನಕ್ಕೆ ಗೈರು ಹಾಜರಾದ ಹಿನ್ನೆಲೆಯಲ್ಲಿ ನೋಟಿಸ್ ನೀಡಿರುವುದಾಗಿ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿವೇಶನದಲ್ಲಿ ಭಾಗವಹಿಸಲು ಸಾಧ್ಯವಾಗದಿದ್ದರೆ ಸಚಿವರು, ಶಾಸಕರು ಲಿಖಿತವಾಗಿ ಅಥವಾ ಮೌಖಿಕವಾಗಿ ಸೂಕ್ತ ಕಾರಣ ನೀಡುತ್ತಾರೆ. ಆದರೆ, ರಮೇಶ್ ಜಾರಕಿಹೊಳಿ ಮತ್ತು ಕೆ.ಎಸ್. ಈಶ್ವರಪ್ಪ ಮಾಹಿತಿ ನೀಡದೆ ಗೈರುಹಾಜರಾಗಿದ್ದು, ಈ ಬಗ್ಗೆ ಸದನದ ಒಪ್ಪಿಗೆ ಪಡೆದು ಅವರಿಗೆ ನೋಟಿಸ್ ನೀಡಲಾಗಿದೆ ಎಂದು ಹೇಳಿದ್ದಾರೆ.