ರಾಮನಗರ: ರಾಮನಗರ ಜಿಲ್ಲೆಯಲ್ಲಿ ಇಂದು ಗುಂಡಿನ ಸದ್ದು ಕೇಳಿಬಂದಿದ್ದು, ನಟೋರಿಯಸ್ ರೌಡಿಶೀಟರ್ ಕಾಲಿಗೆ ಪೊಲೀಸರು ಗುಂಡು ಹಾರಿಸಿರುವ ಘಟನೆ ನಡೆದಿದೆ.
ರಾಮನಗರ ಜಿಲ್ಲೆಯ ಕಗ್ಗಲೀಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ರೌಡಿ ಶೀಟರ್ ಸೈಕಲ್ ಗಿರಿ ಎಂಬಾತನ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ದರೋಡೆ ಪ್ರಕರಣದಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಸೈಕಲ್ ಗಿರಿಯನ್ನು ಇಂದು ಸ್ಥಳ ಮಹಜರಿಗೆ ಪೊಲೀಸರು ಆತನನ್ನು ಕರೆದೊಯ್ಯಲಾಗಿತ್ತು. ಈ ವೇಳೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದ. ಈ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಕಗ್ಗಲಿಪುರ ಠಾಣೆಯ ಪಿಎಸ್ಐ ಲೋಕೇಶ್ ಅವರು ಎಡಗಾಲಿಗೆ ಗುಂಡೇಟು ನೀಡಿ ಬಂಧಿಸಿದ್ದಾರೆ.
ಕಾಲಿಗೆ ಪೊಲೀಸರಿಂದ ಗುಂಡೇಟು ಬಿದ್ದು ಗಾಯಗೊಂಡಿರುವಂತ ಸೈಕಲ್ ಗಿರಿಯನ್ನು ರಾಜರಾಜೇಶ್ವರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.