ಬೆಂಗಳೂರು: ನವೆಂಬರ್ 14ರಂದು ರಾಜ್ಯದ ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಗೋಪೂಜೆ ನೆರವೇರಿಸುವಂತೆ ಸರ್ಕಾರದಿಂದ ಆದೇಶ ಹೊರಡಿಸಲಾಗಿದೆ.
ದೀಪಾವಳಿಯ ಬಲಿಪಾಡ್ಯಮಿ ದಿನ ನವೆಂಬರ್ 14ರಂದು ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಗೋಪೂಜೆ ನಡೆಸಬೇಕು ಎಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದಾರೆ.
ಗೋವುಗಳನ್ನು ಸ್ನಾನ ಮಾಡಿಸಿ ದೇವಾಲಯಕ್ಕೆ ಕರೆತಂದು ಅರಿಶಿಣ, ಕುಂಕುಮ, ಹೂಗಳಿಂದ ಅಲಂಕರಿಸಿ ಅಕ್ಕಿ, ಬೆಲ್ಲ, ಬಾಳೆಹಣ್ಣು, ಸಿಹಿ ತಿನಿಸು ಮುಂತಾದ ಗ್ರಾಸವನ್ನು ಹಸುವಿಗೆ ತಿನ್ನಿಸಿ ಸಂಜೆ 5.30ರಿಂದ 6.30ರವರೆಗೆ ಗೋಧೂಳಿ ಲಗ್ನದಲ್ಲಿ ಗೋಪೂಜೆ ಆಯೋಜಿಸಬೇಕು. ಈ ಬಗ್ಗೆ ದೇವಸ್ಥಾನದ ಸೂಚನಾ ಫಲಕದಲ್ಲಿ ಮಾಹಿತಿ ಪ್ರಕಟಿಸಬೇಕು ಎಂದು ತಿಳಿಸಲಾಗಿದೆ.