
ಬೆಂಗಳೂರು : ನವೆಂಬರ್ 26 ರ ಭಾನುವಾರದಂದು ಸಂವಿಧಾನ ದಿನಾಚರಣೆಯನ್ನು ಆಚರಣೆ ಮಾಡುವ ಕುರಿತಂತೆ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.
ಸರ್ಕಾರದ ಅಧೀನ ಕಾರ್ಯದರ್ಶಿ ಆರ್.ಮಹೇಶ್ ಆದೇಶ ಹೊರಡಿಸಿದ್ದು, ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಭಾರತ ಸರ್ಕಾರದ ಪತ್ರದ ಪ್ರತಿಯನ್ನು ಇದರೊಂದಿಗೆ ಲಗತ್ತಿಸಿದೆ. ಸದರಿ ಪತ್ರದಲ್ಲಿನ ಸೂಚನೆಗಳನ್ನಯ, ಈ ವರ್ಷ 26 ನೇ ನವೆಂಬರ್ 2023 ರ ಭಾನುವಾರ ದಂದು “ಸಂವಿಧಾನ ದಿನ’ ವನ್ನು ಅರ್ಥ ಪೂರ್ಣವಾಗಿ ಆಚರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಿದ್ದಾರೆ.
