ಬೆಂಗಳೂರು: ಬೆಂಗಳೂರಿನ ಸಂಚಾರ ದಟ್ಟಣೆ ನಿಯಂತ್ರಣಕ್ಕೆ ನಗರದ ಪ್ರಮುಖ ಜಂಕ್ಷನ್ಗಳಲ್ಲಿ ಡ್ರೋನ್ ಕ್ಯಾಮೆರಾಗಳನ್ನು ಬಳಸಲಾಗುತ್ತಿದೆ ಎಂದು ಗೃಹ ಸಚಿವ ಜಿ ಪರಮೇಶ್ವರ ತಿಳಿಸಿದ್ದಾರೆ.
ಟ್ರಾಫಿಕ್ ದಟ್ಟಣೆಯನ್ನು ಕಡಿಮೆ ಮಾಡಲು ಬೆಂಗಳೂರು ಟ್ರಾಫಿಕ್ ಪೊಲೀಸರಿಗೆ ಮೂರು ತಿಂಗಳ ಗಡುವನ್ನು ನೀಡಲಾಗಿದೆ. ರಸ್ತೆಗಳಲ್ಲಿ ವಾಹನ ದಟ್ಟಣೆ ಉಂಟಾದರೆ ನಿಖರ ಕಾರಣ ಪತ್ತೆಗೆ ಪೊಲೀಸರಿಗೆ ಆಡಚಣೆಯಾಗುತ್ತಿದೆ.
ಹೀಗಾಗಿ ವಾಹನ ದಟ್ಟಣೆ ತಗ್ಗಿಸಲು ಇನ್ಮುಂದೆ ಡ್ರೋನ್ ಕ್ಯಾಮರಾಗಳನ್ನು ಬಳಸಿ ಸಂಚಾರ ನಿರ್ವಹಣೆ ಮಾಡಲಾಗುತ್ತದೆ. ವಾಹನಗಳ ಓಡಾಟಕ್ಕೆ ಅಡ್ಡಿಯಾದರೆ ಕೂಡಲೇ ಡ್ರೋನ್ ಬಳಸಿ ಯಾವ ಜಾಗದಲ್ಲಿ ಟ್ರಾಫಿಕ್ ಜಾಮ್ ಆಗಿದೆ ಎಂಬುದನ್ನು ಪತ್ತೆ ಮಾಡಿ ಸಮಸ್ಯೆ ಬಗೆಹರಿಸಲಿದೆ ಎಂದು ಅವರು ಹೇಳಿದರು.
ಪ್ರತಿ ದಿನ ಬೆಳಗ್ಗೆ ಹಾಗೂ ಸಂಜೆ ವೇಳೆ ಎರಡು ಗಂಟೆಗಳು ಸಂಚಾರ ವಿಭಾಗದ ಎಲ್ಲ ಪೊಲೀಸರು ರಸ್ತೆಯಲ್ಲಿ ನಿಂತು ಸಂಚಾರ ನಿರ್ವಹಣೆ ಮಾಡಬೇಕು. ಸಂಚಾರ ದಟ್ಟಣೆ ಉಂಟಾದರೆ ಡಿಸಿಪಿ ಹಾಗೂ ಎಸಿಪಿ ಅವರನ್ನು ಸಹ ಹೊಣೆ ಮಾಡಲಾಗುತ್ತದೆ ಎಂದಿದ್ದಾರೆ.