alex Certify ಸರ್ಕಾರಿ ನೌಕರರ NPS ರದ್ದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ 15 ರಂದು ಪ್ರತಿಭಟನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಸರ್ಕಾರಿ ನೌಕರರ NPS ರದ್ದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜುಲೈ 15 ರಂದು ಪ್ರತಿಭಟನೆ

ಬೆಂಗಳೂರು: 18 ತಿಂಗಳ ತುಟ್ಟಿಭತ್ಯೆ ಬಿಡುಗಡೆ, ಎನ್.ಪಿ.ಎಸ್. ರದ್ದುಗೊಳಿಸುವುದು ಮತ್ತು ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಜುಲೈ 15 ರಂದು ಸರ್ಕಾರಿ ನೌಕರರು ಪ್ರತಿಭಟನೆ ಕೈಗೊಂಡಿದ್ದಾರೆ.

ಅಖಿಲ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟದಿಂದ ಪ್ರತಿಭಟನೆಗೆ ಕರೆ ನೀಡಲಾಗಿದ್ದು, ಎನ್.ಪಿ.ಎಸ್. ರದ್ದುಗೊಳಿಸಬೇಕು. ನಿಶ್ಚಿತ ಪಿಂಚಣಿ ನೀಡಬೇಕೆಂದು ಒತ್ತಾಯಿಸಲಾಗಿದೆ. ಶಾಲಾ ಶಿಕ್ಷಕರು, ಫ್ರಂಟ್ಲೈನ್ ವಾರಿಯರ್ ಗಳು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದಾರೆ. ಇವರೆಲ್ಲರಿಗೂ ಪರಿಹಾರ ನೀಡಬೇಕು. ಎಲ್ಲರಿಗೂ ಉಚಿತವಾಗಿ ಶೀಘ್ರವೇ ಲಸಿಕೆ ನೀಡಬೇಕು. ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ 2.80 ಲಕ್ಷ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಗಿದೆ.

ಜುಲೈ 15 ರಂದು ಊಟದ ವಿರಾಮದ ವೇಳೆ ಕೋವಿಡ್ ನಿಯಮ ಪಾಲನೆಯೊಂದಿಗೆ ಪ್ರತಿಭಟನೆ ನಡೆಸಲಾಗುವುದು ಎಂದು ಹೇಳಲಾಗಿದೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...