alex Certify ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಎನ್.ಪಿ.ಎಸ್. ರದ್ದುಪಡಿಸಿ ಒಪಿಎಸ್ ಮರು ಜಾರಿಗೆ ಕ್ರಮ: ಡಿಸಿಎಂ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಚುನಾವಣೆಯಲ್ಲಿ ನೀಡಿದ ಭರವಸೆಯಂತೆ ಎನ್.ಪಿ.ಎಸ್. ರದ್ದುಪಡಿಸಿ ಒಪಿಎಸ್ ಮರು ಜಾರಿಗೆ ಕ್ರಮ: ಡಿಸಿಎಂ

ಬೆಂಗಳೂರು: ಹೊಸ ಪಿಂಚಣಿ ಪದ್ಧತಿ ರದ್ದುಗೊಳಿಸಿ ಈ ಹಿಂದೆ ಇದ್ದ ಹಳೆ ಪಿಂಚಣಿ ಪದ್ಧತಿಯನ್ನು ಪುನರ್ ಜಾರಿಗೊಳಿಸಬೇಕೆಂದು ಸರ್ಕಾರಿ ನೌಕರರು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ, ಪಿಯು ಕಾಲೇಜು ಉಪನ್ಯಾಸಕರ ಸಂಘ, ರಾಜ್ಯ ಎನ್‌ಪಿಎಸ್ ನೌಕರರ ಸಂಘ ಹಾಗೂ ಇತರೆ ಸಂಘಟನೆಗಳ ಪ್ರತಿನಿಧಿಗಳ ನಿಯೋಗದಿಂದ ಸೋಮವಾರ ಕುಮಾರ ಕೃಪಾ ಅತಿಥಿ ಗೃಹದಲ್ಲಿ ಉಪಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಲಾಗಿದೆ.

ಎನ್‌ಪಿಎಸ್ ರದ್ದು ಮಾಡುವಂತೆ ಹಿಂದೆ ನೌಕರರು ಫ್ರೀಡಂ ಪಾರ್ಕ್ ನಲ್ಲಿ ನಡೆಸಿದ ಹೋರಾಟಕ್ಕೆ ತಮ್ಮನ್ನು ಒಳಗೊಂಡಂತೆ ಕಾಂಗ್ರೆಸ್ ಹಲವು ನಾಯಕರು ಪ್ರತಿಪಕ್ಷದಲ್ಲಿದ್ದಾಗ ಬೆಂಬಲ ನೀಡಿದ್ದು, ವಿಧಾನಸಭೆ ಚುನಾವಣೆ ಪ್ರಣಾಳಿಕೆಯಲ್ಲಿಯೂ ಅಧಿಕಾರಕ್ಕೆ ಬಂದರೆ ಎನ್.ಪಿ.ಎಸ್. ರದ್ದು ಮಾಡುವುದಾಗಿ ಭರವಸೆ ನೀಡಲಾಗಿತ್ತು. ಭರವಸೆಯಂತೆ ಸರ್ಕಾರ ಕ್ರಮ ಕೈಗೊಳ್ಳಬೇಕು. ಒಪಿಎಸ್ ಜಾರಿಗೊಳಿಸಬೇಕು ಎಂದು ಮನವಿ ಮಾಡಲಾಗಿದೆ.

ಇದಕ್ಕೆ ಸ್ಪಂದಿಸಿದ ಡಿಸಿಎಂ ಡಿ.ಕೆ. ಶಿವಕುಮಾರ್, ಎನ್‌ಪಿಎಸ್ ನೌಕರರಿಗೆ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಗಮನದಲ್ಲಿದ್ದು, ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯೂ ಗಮನದಲ್ಲಿದೆ. ಒಂದೇ ಬಾರಿಗೆ ಎಲ್ಲವನ್ನು ಮಾಡಲಾಗುವುದಿಲ್ಲ. ಎಲ್ಲಾ ಭರವಸೆಗಳನ್ನು ಒಂದೊಂದಾಗಿ ಈಡೇರಿಸುತ್ತೇವೆ. ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...