ದಾವಣಗೆರೆ: ಎನ್.ಪಿ.ಎಸ್. ರದ್ದುಗೊಳಿಸಿ ಹಳೇ ಪಿಂಚಣಿ ವ್ಯವಸ್ಥೆ ಮರು ಜಾರಿಗೆ ಎನ್‌ಪಿಎಸ್ ನೌಕರರ ಸಂಘ ಆಗ್ರಹಿಸಿದೆ.
ಭಾನುವಾರ ಶಾಂತರಾಮ ತೇಜ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಸರ್ಕಾರಿ ಎನ್‌ಪಿಎಸ್ ನೌಕರರ ಸಂಘದ ವಿಶೇಷ ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ಒಪಿಎಸ್ ಮರು ಜಾರಿಗೊಳಿಸಲು ಸರ್ಕಾರಕ್ಕೆ 2025ರ ಜನವರಿ 15ರವರೆಗೆ ಗಡುವು ನೀಡಲಾಗಿದೆ.
ನಿಗದಿತ ಕಾಲಾವಧಿಯಲ್ಲಿ ಸರ್ಕಾರ ಹಳೆ ಪಿಂಚಣಿ ಜಾರಿಗೊಳಿಸದಿದ್ದರೆ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ. ಒಪಿಎಸ್ ಜಾರಿ ಸಾಧ್ಯತೆಗಳ ಕುರಿತು ಪರಿಶೀಲಿಸಲು ರಾಜ್ಯ ಸರ್ಕಾರ ರಚಿಸಿರುವ ಸಮಿತಿಯನ್ನು ವಿರೋಧಿಸಿ ಸಭೆಯಲ್ಲಿ ನಿರ್ಣಯ ಕೈಗೊಂಡಿದ್ದು, ಸರ್ವಾನುಮತದ ಅನುಮೋದಿಸಲಾಗಿದೆ. 2025ರ ಜನವರಿ 15ರೊಳಗೆ ಹಳೆ ಪಿಂಚಣಿ ವ್ಯವಸ್ಥೆ ಜಾರಿಗೊಳಿಸಬೇಕು. ಇಲ್ಲದಿದ್ದರೆ ಹೋರಾಟ ನಡೆಸಲಾಗುವುದು ಎಂದು ಹೇಳಲಾಗಿದೆ.