ಬೆಂಗಳೂರು: ಹೊಸ ಎಂಪಿಎಸ್ ಪಿಂಚಣಿ ಯೋಜನೆ ರದ್ದು ಮಾಡುವಂತೆ ಪಕ್ಷಬೇಧ ಮರೆತು ವಿಧಾನಪರಿಷತ್ ನಲ್ಲಿ ಸದಸ್ಯರು ಒತ್ತಾಯಿಸಿದ್ದಾರೆ.
ಸರ್ಕಾರಿ ನೌಕರರಿಗೆ ಹೊಸ ಪಿಂಚಣಿ ಯೋಜನೆ ಭದ್ರತೆ ನೀಡುವಲ್ಲಿ ವಿಫಲವಾಗಿದೆ. ಕಷ್ಟಕ್ಕೆ ದೂಡುವ ಹೊಸ ಪಿಂಚಣಿ ಯೋಜನೆಯನ್ನು ರದ್ದುಗೊಳಿಸಬೇಕು. ಹಳೆಯ ಪಿಂಚಣಿ ಯೋಜನೆಯನ್ನು ಮತ್ತೆ ಜಾರಿಗೊಳಿಸಬೇಕು ಎಂದು ವಿಧಾನಪರಿಷತ್ ನಲ್ಲಿ ಸದಸ್ಯರು ಪಕ್ಷಾತೀತವಾಗಿ ಒತ್ತಾಯಿಸಿದ್ದಾರೆ.
ವಿಧಾನ ಪರಿಷತ್ನಲ್ಲಿ ಗಮನಸೆಳೆಯುವ ಸೂಚನೆಯಡಿ ಮಾತನಾಡಿದ ಸದಸ್ಯರು, ಹೊಸ ಪಿಂಚಣಿ ಯೋಜನೆಯಿಂದ ನೌಕರರ ನಿವೃತ್ತಿ ನಂತರ ಬದುಕು ಚೆನ್ನಾಗಿರುತ್ತದೆ ಎಂದು ಭಾವಿಸಿದ್ದರು. ಆದರೆ ನೌಕರರಿಗೆ ಹೊಸ ಪಿಂಚಣಿ ಯೋಜನೆಯಿಂದ ಹೆಚ್ಚಿನ ಅನುಕೂಲವಾಗಲ್ಲ. ನೆಮ್ಮದಿಯಾಗಿ ಜೀವನ ನಡೆಸಲು ಸಾಧ್ಯವಾಗುವುದಿಲ್ಲ ಎನ್ನುವುದು ಗೊತ್ತಾಗಿದೆ. ಹಾಗಾಗಿ ಹೊಸ ಪಿಂಚಣಿ ಯೋಜನೆ ರದ್ದು ಮಾಡಿ ಹಳೆ ಪಿಂಚಣಿ ಯೋಜನೆಯನ್ನು ಮತ್ತೆ ಜಾರಿಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.