ಬೆಂಗಳೂರು: ನರೇಗಾ ಯೋಜನೆಯ ಮಾನವ ದಿನ 150ಕ್ಕೆ ಹೆಚ್ಚಳ ಮಾಡುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬರ ಪರಿಸ್ಥಿತಿ ಎದುರಿಸಲು ಪ್ರತಿ ತಾಲೂಕುಗಳಲ್ಲೂ ಟ್ರಾಸ್ಕ್ ಫೋಸ್ ರಚನೆ ಮಾಡಲಾಗುವುದು. ಬರ ಘೋಷಣೆಯಾಗುತ್ತಿದ್ದಂತೆ ಉದ್ಯೋಗ ಖಾತ್ರಿ ಯೋಜನೆ ಅಡಿ 100 ಮಾನವ ದಿನಗಳನ್ನು 150 ದಿನಗಳಿಗೆ ಹೆಚ್ಚಳ ಮಾಡಲಾಗುವುದು. ಈ ಕುರಿತಾಗಿ ಗ್ರಾಮೀಣಾಭಿವೃದ್ಧಿ ಇಲಾಖೆ ಸಚಿವರೊಂದಿಗೆ ಚರ್ಚೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.
ಕುಡಿಯುವ ನೀರಿನ ಸಮಸ್ಯೆಯಾದಲ್ಲಿ ಕ್ರಮ ಕೈಗೊಳ್ಳಲು ಜಿಲ್ಲಾ ಪಂಚಾಯಿತಿ ಸಿಇಒಗಳ ಖಾತೆಗೆ ತಲಾ ಒಂದು ಕೋಟಿ ರೂ. ವರ್ಗಾವಣೆ ಮಾಡಲಾಗಿದೆ. ಜಿಲ್ಲಾಧಿಕಾರಿಗಳ ಖಾತೆಯಲ್ಲಿ ಒಟ್ಟಾರೆ 462 ಕೋಟಿ ರೂ ಇದ್ದು, ಕುಡಿಯುವ ನೀರು ಪೂರೈಕೆಗೆ ಬಳಕೆ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.