ಬೆಂಗಳೂರು: ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ರಾಜ್ಯಕ್ಕೆ 742.09ಕೋಟಿ ರೂ. ಮಂಜೂರು ಮಾಡಿದೆ. ಇನ್ನೊಂದು ವಾರದೊಳಗೆ ನರೇಗಾ ಕಾರ್ಮಿಕರ ಬ್ಯಾಂಕ್ ಖಾತೆಗೆ ಕೂಲಿ ಹಣ ನೇರವಾಗಿ ಪಾವತಿಸಲಾಗುವುದು.
ರಾಜ್ಯದಾದ್ಯಂತ ನರೇಗಾ ಯೋಜನೆಯಡಿ ಕೆಲಸ ಮಾಡಿದ ಕಾರ್ಮಿಕರಿಗೆ ಎರಡು ತಿಂಗಳಿನಿಂದ ಕೂಲಿ ಹಣ ಸರಿಯಾಗಿ ಪಾವತಿಸಿರಲಿಲ್ಲ. ಫೆಬ್ರವರಿ 14ರ ವೇಳೆಗೆ ಕೂಲಿ ಮೊತ್ತ 605.97 ಕೋಟಿ ರೂ. ಬಾಕಿ ಉಳಿದಿತ್ತು. ಕೇಂದ್ರ ಸರ್ಕಾರ ರಾಜ್ಯಕ್ಕೆ ಫೆಬ್ರವರಿ 12ರಂದು 742.09 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ಆಯುಕ್ತರು ಮಾಹಿತಿ ನೀಡಿದ್ದಾರೆ.
ವಾರದೊಳಗೆ ನರೇಗಾ ಯೋಜನೆಯಡಿ ಕೆಲಸ ಮಾಡಿದ ಕಾರ್ಮಿಕರ ಬ್ಯಾಂಕ್ ಖಾತೆಗೆ ಕೂಲಿ ಹಣ ನೇರವಾಗಿ ಪಾವತಿಸಲಾಗುತ್ತದೆ ಎಂದು ಹೇಳಲಾಗಿದೆ.