alex Certify ಅನಿವಾಸಿ ಭಾರತೀಯರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ..? | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅನಿವಾಸಿ ಭಾರತೀಯರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ..?

ನವದೆಹಲಿ: ಅನಿವಾಸಿ ಭಾರತೀಯ(NRI) ಮತದಾರರಿಗೂ ಅಂಚೆ ಮೂಲಕ ಮತ ಚಲಾಯಿಸುವ ಸೌಲಭ್ಯ ಕಲ್ಪಿಸುವಂತೆ ಚುನಾವಣಾ ಆಯೋಗದಿಂದ ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.

ಅರ್ಹ ಅನಿವಾಸಿ ಭಾರತೀಯ ಮತದಾರರಿಗೆ ಅಂಚೆ ಮೂಲಕ ಮತ ಚಲಾವಣೆ ಸೌಲಭ್ಯ ಕಲ್ಪಿಸಲು ಪ್ರಸ್ತಾವನೆ ಸಲ್ಲಿಸಲಾಗಿದೆ. 2018 ರ ಅಕ್ಟೋಬರ್ ನಲ್ಲಿ ಅನಿವಾಸಿ ಭಾರತೀಯರಿಗೆ ಅಂಚೆ ಮತದಾನಕ್ಕೆ ಅವಕಾಶ ಕಲ್ಪಿಸುವ ಕುರಿತಾದ ವಿಧೇಯಕಕ್ಕೆ ಲೋಕಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ರಾಜ್ಯಸಭೆಯಲ್ಲಿ ಬಹುಮತದ ಕೊರತೆ ಕಾರಣ ಅನುಮೋದನೆ ದೊರೆತಿರಲಿಲ್ಲ.

ಕೆಲವೇ ತಿಂಗಳುಗಳಲ್ಲಿ ತಮಿಳುನಾಡು, ಪುದುಚೇರಿ, ಪಶ್ಚಿಮ ಬಂಗಾಳ, ಕೇರಳ ವಿಧಾನಸಭೆ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ ಅರ್ಹ ಅನಿವಾಸಿ ಭಾರತೀಯರಿಗೆ ಅಂಚೆ ಮೂಲಕ ಮತದಾನ ಸೌಕರ್ಯವನ್ನು ಕಾರ್ಯಗತಗೊಳಿಸಲು ಚುನಾವಣಾ ಆಯೋಗ ಸಿದ್ಧವಾಗಿದ್ದು, ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಹೇಳಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...