ಬೆಂಗಳೂರು : ಭಾರತೀಯ ಭೌತಶಾಸ್ತ್ರ ಶಿಕ್ಷಕರ ಒಕ್ಕೂಟ ಆಯೋಜಿಸಿರುವ ರಾಷ್ಟ್ರೀಯ ಪ್ರಮಾಣಿತ ಪರೀಕ್ಷೆ (NSE)ಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ಕೊಡಬೇಕೆಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಅಣು ಇಂಧನ ಇಲಾಖೆಯ ನ್ಯಾಷನಲ್ ಸ್ಟೀರಿಂಗ್ ಕಮಿಟಿಯ ಮೇಲುಸ್ತುವಾರಿಯಲ್ಲಿ ನಡೆಯುವ ಎನ್ ಎಸ್ ಇ, ಅಂತಾರಾಷ್ಟ್ರೀಯ ಒಲಿಂಪಿಯಾರ್ಡ್ ನಲ್ಲಿ ಸ್ಪರ್ಧಿಸಲು ಭಾರತದ ಸ್ಪರ್ಧಿಗಳನ್ನು ಆಯ್ಕೆ ಮಾಡುವ ಪ್ರತಿಷ್ಠಿತ ಪರೀಕ್ಷೆಯಾಗಿದೆ. ಆದರೆ ಎನ್ ಎಸ್ ಇಯ ಭೌತಶಾಸ್ತ್ರ, ರಸಾಯನ ಶಾಸ್ತ್ರ, ಜೀವಶಾಸ್ತ್ರ, ಖಗೋಳ ಶಾಸ್ತ್ರ ಪರೀಕ್ಷೆಯನ್ನು ಕನ್ನಡದಲ್ಲಿ ಬರೆಯಲು ಅವಕಾಶ ಮಾಡಿಕೊಡುವಂತೆ ಪ್ರಧಾನಿ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಪತ್ರದ ಮೂಲಕ ಮನವಿ ಮಾಡಿದ್ದಾರೆ.