ಬೆಂಗಳೂರು: ಇಂದು ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳನ್ನು ಬಂದ್ ಮಾಡಲಾಗುವುದು. ಎನ್.ಎಸ್.ಯು.ಐ. ವಿದ್ಯಾರ್ಥಿ ಸಂಘಟನೆ ವಿವಿಧ ಬೇಡಿಕೆಗಳ ಈಡೇರಿಕೆ ಆಗ್ರಹಿಸಿ ಬಂದ್ ಗೆ ಕರೆ ನೀಡಿದೆ. ಇಂದು ವಿಶ್ವವಿದ್ಯಾಲಯಗಳಲ್ಲಿ ಬಂದ್ ಮಾಡಿ ಪ್ರತಿಭಟನೆ ನಡೆಸಲು ಕರೆ ನೀಡಲಾಗಿದೆ.
ಪರೀಕ್ಷೆ ಫಲಿತಾಂಶ ವಿಳಂಬ, ವಿದ್ಯಾರ್ಥಿ ವೇತನ ಸಮಸ್ಯೆಗಳು, ಬಸ್ ಸಾರಿಗೆ ಸಮಸ್ಯೆ, ಸರ್ಕಾರಿ ಕಾಲೇಜು ಶುಲ್ಕ ಹೆಚ್ಚಳ ವಿರೋಧಿಸಿ ಪ್ರತಿಭಟನೆ ಕೈಗೊಳ್ಳಲಾಗಿದೆ.
ಸರಿಯಾದ ಸಮಯಕ್ಕೆ ಫಲಿತಾಂಶ ನೀಡಬೇಕು. ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು. ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಬೇಕು. ಸರ್ಕಾರಿ ಕಾಲೇಜುಗಳಲ್ಲಿ ಶುಲ್ಕ ಕಡಿಮೆ ಮಾಡಬೇಕು ಎಂದು ಒತ್ತಾಯಿಸಿ ವಿಶ್ವವಿದ್ಯಾಲಯಗಳು ಮತ್ತು ಸಂಯೋಜಿತ ಕಾಲೇಜುಗಳನ್ನು ಬಂದ್ ಮಾಡುವಂತೆ ಕರೆ ನೀಡಲಾಗಿದೆ.