ಬೆಂಗಳೂರು: ರಾಜ್ಯದಲ್ಲಿ ವಾಹನಗಳಿಗೆ ಹೆಚ್‌ಎಸ್‌ಆರ್‌ಪಿ ನಂಬರ್ ಪ್ಲೇಟ್ ಅಳವಡಿಕೆಗೆ ನೀಡಲಾಗಿದ್ದ ಗಡುವು ಮತ್ತೆ ವಿಸ್ತರಣೆಯಾಗದೆ. ಈ ಮೂಲಕ ವಾಹನ ಸವಾರರಿಗೆ ಗುಡ್‌ನ್ಯೂಸ್ ಸಿಕ್ಕಂತಾಗಿದೆ.
ನವೆಂಬರ್ 30ರವರೆಗೆ HSRP ನಂಬರ್ ಪ್ಲೇಟ್ ಅಳವಡಿಕೆಗೆ ಸಮಯ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. HSRP ಅಳವಡಿಕೆ ಅವಧಿ ಮುಗಿದಿದ್ದರೂ ಸರ್ಕಾರದಿಂದ ಮೂರ್ನಾಲ್ಕು ಬಾರಿ ಕಾಲಾವಕಾಶ ನೀಡಲಾಗಿತ್ತು. ಹೀಗಿದ್ದರೂ ಅನೇಕರು ಇನ್ನು HSRP ನಂಬರ್ ಪ್ಲೇಟ್ ಅಳವಡಿಸಿಕೊಂಡಿಲ್ಲ. ಹೀಗಾಗಿ ಮತ್ತೊಂದು ಅವಕಾಶ ಕಲ್ಪಿಸಿ ಗಡುವು ವಿಸ್ತರಿಸಲಾಗಿದೆ.
ರಾಜ್ಯದಲ್ಲಿ 1.9 ಕೋಟಿ ಹಳೆ ವಾಹನಗಳ ಪೈಕಿ 55 ಲಕ್ಷ ವಾಹನಗಳಿಗೆ HSRP ಅಳವಡಿಸಲಾಗಿದೆ. ಇನ್ನೂ ಬಾಕಿ ವಾಹನಗಳ ಮಾಲೀಕರು HSRP ಅಳವಡಿಸಿಕೊಳ್ಳದ ಹಿನ್ನೆಲೆಯಲ್ಲಿ ನವೆಂಬರ್ 30ರವರೆಗೆ ಅವಕಾಶ ಕಲ್ಪಿಸಲಾಗಿದೆ. ಡಿಸೆಂಬರ್ 1ರಿಂದ ದಂಡ ಪ್ರಯೋಗಿಸಲು ಸಾರಿಗೆ ಇಲಾಖೆ ತೀರ್ಮಾನಿಸಿದೆ. ಹೀಗಾಗಿ 2019ಕ್ಕಿಂತ ಮೊದಲು ನೋಂದಣಿಯಾದ ವಾಹನಗಳಿಗೆ HSRP ನಂಬರ್ ಪೆಟ್ ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕಿದೆ.