
ಬೆಂಗಳೂರು: ಅಹೋರಾತ್ರಿ ಪ್ರತಿಭಟನೆಯನ್ನು ತಾತ್ಕಾಲಿಕವಾಗಿ ನರ್ಸ್ ಗಳು ಹಿಂಪಡೆದುಕೊಂಡಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿದ್ದ ಹೋರಾಟವನ್ನು ಕೈಬಿಟ್ಟಿದ್ದಾರೆ.
ಪ್ರತಿಭಟನಾ ಸ್ಥಳಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ನರ್ಸ್ ಗಳ ಬೇಡಿಕೆ ಆಲಿಸಿ ಈಡೇರಿಸುವ ಭರವಸೆ ನೀಡಿದ್ದಾರೆ. ಸಚಿವರ ಭರವಸೆ ಹಿನ್ನೆಲೆಯಲ್ಲಿ ನರ್ಸ್ ಗಳು ಹೋರಾಟವನ್ನು ತಾತ್ಕಾಲಿಕವಾಗಿ ಹಿಂಪಡೆದುಕೊಂಡಿದ್ದಾರೆ.
ಸಮಾನ ಕೆಲಸಕ್ಕೆ ಸಮಾನ ವೇತನ, ಉದ್ಯೋಗ ಕಾಯಂಗೊಳಿಸುವುದು, ನೇಮಕಾತಿ ವೇಳೆ ಸದ್ಯ ಕೆಲಸ ಮಾಡುತ್ತಿರುವ ಸಿಬ್ಬಂದಿಗೆ ಮೊದಲ ಆದ್ಯತೆ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಳೆದ ಆರು ದಿನಗಳಿಂದ ನರ್ಸ್ ಗಳು ಹೋರಾಟ ನಡೆಸುತ್ತಿದ್ದರು.
ಅಹೋರಾತ್ರಿ ಹೋರಾಟ ನಡೆಸುತ್ತಿದ್ದ ಆರೋಗ್ಯ ಇಲಾಖೆಯ ಶುಶ್ರೂಷಕ ಸಿಬ್ಬಂದಿ ಸಚಿವರ ಭರವಸೆ ಹಿನ್ನಲೆಯಲ್ಲಿ ತಾತ್ಕಾಲಿಕವಾಗಿ ಹೋರಾಟ ಸ್ಥಗಿತಗೊಳಿಸಿದ್ದಾರೆ.