ಬೆಂಗಳೂರು: ರಾಜ್ಯ ಸರ್ಕಾರ ಹೊಸದಾಗಿ 37 ನರ್ಸಿಂಗ್ ಕಾಲೇಜುಗಳಿಗೆ ಮಂಜೂರಾತಿ ನೀಡಿದ್ದು, 1315 ಸೀಟುಗಳನ್ನು ಸೇರ್ಪಡೆ ಮಾಡಲಾಗಿದೆ. ಈ ಸೀಟುಗಳ ಹಂಚಿಕೆಗೆ ವಿಶೇಷ ಸುತ್ತಿನ ಕೌನ್ಸೆಲಿಂಗ್ ನಡೆಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಈ ಕುರಿತದ ಹೆಚ್ಚಿನ ಮಾಹಿತಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಆಸಕ್ತರು ಅಕ್ಟೋಬರ್ 28ರಿಂದ 29ರ ಮಧ್ಯಾಹ್ನ 12 ಗಂಟೆಯವರೆಗೆ ಕಾಲೇಜು ಸೀಟುಗಳ ಆಯ್ಕೆ ದಾಖಲಿಸಬಹುದು. ಅದೇ ಸಂಜೆ 6 ಗಂಟೆಗೆ ಸೀಟು ಹಂಚಿಕೆಯ ಫಲಿತಾಂಶ ಪ್ರಕಟಿಸಲಾಗುತ್ತದೆ. ಸೀಟು ದೊರೆತವರು ಅಕ್ಟೋಬರ್ 30ರೊಳಗೆ ಸಂಬಂಧಿಸಿದ ಕಾಲೇಜುಗಳಲ್ಲಿ ವರದಿ ಮಾಡಿಕೊಳ್ಳಬೇಕೆಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.