alex Certify ಡೆಂಗ್ಯೂ ಜ್ವರಕ್ಕೆ ಬಲಿಯಾದ ನರ್ಸಿಂಗ್ ಆಫೀಸರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಡೆಂಗ್ಯೂ ಜ್ವರಕ್ಕೆ ಬಲಿಯಾದ ನರ್ಸಿಂಗ್ ಆಫೀಸರ್

ಶಿವಮೊಗ್ಗ: ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆ ನರ್ಸಿಂಗ್ ಆಫೀಸರ್(ನರ್ಸ್) ಹೇಮಾ(45) ಚಿಕಿತ್ಸೆ ಫಲಿಸದೇ ಸಾವು ಕಂಡಿದ್ದಾರೆ.

ಭದ್ರಾವತಿಯ ಹೇಮಾ ಅವರು ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಕೆಲವು ದಿನಗಳ ಹಿಂದೆ ಜ್ವರಕ್ಕೆ ತುತ್ತಾಗಿ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ.

ಅವರು ತಮ್ಮ ಇಬ್ಬರು ಮಕ್ಕಳನ್ನು ಬಿಟ್ಟು ಅಗಲಿದ್ದಾರೆ. ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆಯ ಸಿಬ್ಬಂದಿಗಳು ಮತ್ತು ವೈದ್ಯರು ಕಂಬನಿ ಮಿಡಿದಿದ್ದು, ಅವರ ಕುಟುಂಬಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...