alex Certify SHOCKING: ಐಸಿಯುನಲ್ಲೇ ಮಹಿಳಾ ರೋಗಿ ಮೇಲೆ ನರ್ಸಿಂಗ್ ಸಿಬ್ಬಂದಿ ಅತ್ಯಾಚಾರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SHOCKING: ಐಸಿಯುನಲ್ಲೇ ಮಹಿಳಾ ರೋಗಿ ಮೇಲೆ ನರ್ಸಿಂಗ್ ಸಿಬ್ಬಂದಿ ಅತ್ಯಾಚಾರ

ರಾಜಸ್ಥಾನದ ಅಲ್ವಾರ್ ಜಿಲ್ಲೆಯಲ್ಲಿ ಮಂಗಳವಾರ ಖಾಸಗಿ ಆಸ್ಪತ್ರೆಯೊಂದರ ಐಸಿಯುಗೆ ದಾಖಲಾಗಿದ್ದ 24 ವರ್ಷದ ಮಹಿಳೆಯೊಬ್ಬರ ಮೇಲೆ ನರ್ಸಿಂಗ್ ಸಹಾಯಕ ಅತ್ಯಾಚಾರವೆಸಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಶ್ವಾಸಕೋಶದ ಸೋಂಕಿನಿಂದ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆರೋಪಿ ಚಿರಾಗ್ ಯಾದವ್ ಮುಂಜಾನೆ 4 ಗಂಟೆ ಸುಮಾರಿಗೆ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಶಿವಾಜಿ ಪಾರ್ಕ್ ಸ್ಟೇಷನ್ ಹೌಸ್ ಆಫೀಸರ್(ಎಸ್‌ಹೆಚ್‌ಒ) ರಾಜ್‌ಪಾಲ್ ಸಿಂಗ್ ಹೇಳಿದ್ದಾರೆ.

ಪತಿ ಮೊಬೈಲ್‌ಗೆ ಕರೆ ಮಾಡಿದ ನಂತರ ಮಹಿಳೆಗೆ ಪ್ರಜ್ಞೆ ಬಂದಿದೆ. ನಂತರ ಆಕೆ ತನ್ನ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದು, ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದ್ದು, ಅವರು ಹಾಸಿಗೆಗೆ ಹೋಗಿ ಕರ್ಟನ್‌ನಿಂದ ಮುಚ್ಚಿರುವುದು ಕಂಡುಬಂದಿದೆ. ಎಫ್‌ಐಆರ್ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...