alex Certify NWKRTC ಬಸ್ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ; 6 ಜನರಿಗೆ ಗಾಯ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

NWKRTC ಬಸ್ ಮೇಲೆ ಕಿಡಿಗೇಡಿಗಳಿಂದ ಕಲ್ಲು ತೂರಾಟ; 6 ಜನರಿಗೆ ಗಾಯ

ತುಮಕೂರು: ಎನ್ ಡಬ್ಲ್ಯು ಕೆ ಆರ್ ಟಿಸಿ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, 6 ಪ್ರಯಾಣಿಕರು ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ಟೋಲ್ ಬಳಿ ನಡೆದಿದೆ.

ಬೆಂಗಳೂರಿನಿಂದ ದಾವಣಗೆರೆ ತೆರಳುತ್ತಿದ್ದ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಬಸ್ ನ ಮುಂಭಾಗದ ಗಾಜು ಸಂಪೂರ್ಣ ಪುಡಿ ಪುಡಿಯಾಗಿದ್ದು, ಘಟನೆಯಲ್ಲಿ 6 ಪ್ರಯಾಣಿಕರು ಗಾಯಗೊಂಡಿದ್ದಾರೆ.

ಶಿರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ, ಬಸ್ ಮೇಲೆ ಕಲ್ಲು ತೂರಾಟ ನಡೆಸಿರುವ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...