![](https://kannadadunia.com/wp-content/uploads/2022/09/basangouda-patil-yatnal-jpg-710x400xt-jpg_1200x900xt.jpg)
ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕನ ಆಯ್ಕೆ ಸಂಬಂಧ ಬಿಜೆಪಿಯಲ್ಲಿ ಅಸಮಾಧನಗೊಂಡಿರುವ ನಾಯಕರ ಕುರಿತು ಕಾಂಗ್ರೆಸ್ ಪೋಸ್ಟರ್ ವೊಂದನ್ನು ಬಿಡುಗಡೆ ಮಾಡಿದೆ.
ಕಾಂಗ್ರೆಸ್ ಎಕ್ಸ್ ನಲ್ಲಿ ಹೊಸ ಪೋಸ್ಟರ್ ಬಿಡುಗಡೆ ಮಾಡಿದ್ದು, ಬಿಜೆಪಿ ಕಚೇರಿ ಶ್ರೀಮಂತರ ಚಹಾ ಹೋಟೆಲ್, ಇಲ್ಲಿ ಬಡವರ ಚಹಾ ಸಿಗಲ್ಲ ಅಂತ ಹೊರಗೆ ಟೀ ಕುಡಿಯಲು ಹೋದವರು ಜಗನ್ನಾಥ ಭವನದ ಎದುರು ಟೀ ಮಾರಿಕೊಂಡು ಕೂತಿದ್ದಾರಂತೆ, ಮೋದಿ ಮಾದರಿ, ಹೇ ಜಗನ್ನಾಥ ಪ್ರಭು, ನೀನೆಷ್ಟು ಕ್ರೂರಿ..?! ‘ಜಾರಿದವರ ಯತ್ನ ಬೆಲ್ಲ’ ಆಗ್ಲಿಲ್ಲವಲ್ಲಪ್ಪ..! ಎಂದು ವ್ಯಂಗ್ಯವಾಡಿದೆ.
ಇದಕ್ಕೆ ಖಾರವಾಗಿ ಪ್ರತಿಕ್ರಿಯೆ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಹೇ ಪ್ರಭು ಚಹಾ ಮಾರಿಕೊಂಡು ಆದರೂ ಬದುಕಬಹುದು ನಿಮ್ಮಂತೆ ಬದುಕು ಮಾರಿಕೊಂಡು ಅಲ್ಲ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟ್ವೀಟ್ ಮಾಡಿದ್ದಾರೆ.