ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿಗೆ ಭಾರತೀಯ ಸೇನೆ ಸೇರಿದಂತೆ ಇತರೆ ಸಮವಸ್ತ್ರ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ), 3(ಬಿ) ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡಲಾಗುತ್ತದೆ.
ತರಬೇತಿಗಾಗಿ ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನವಾಗಿರುತ್ತದೆ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಇಲಾಖಾ https://bcwd.karnataka.gov.in ನಿಂದ ಪಡೆಯಬಹುದು. ದೂ.ಸಂ: ದಕ್ಷಿಣ ಕನ್ನಡ ಜಿಲ್ಲೆ: ದೂ.ಸಂ. 0824-2225078, ಉಡುಪಿ ಜಿಲ್ಲೆ -0820-2574881, ಉತ್ತರ ಕನ್ನಡ ಜಿಲ್ಲೆ: ದೂ.ಸಂ. 08382-226589 ಅನ್ನು ಸಂಪರ್ಕಿಸಬಹುದೆಂದು ದಾವಣಗೆರೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.