ಚಿಕ್ಕಮಗಳೂರು : ಸೋಶಿಯಲ್ ಮೀಡಿಯಾದಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ ಹಿನ್ನೆಲೆ ಮಾಜಿ ಶಾಸಕ ಸಿ.ಟಿ ರವಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಸೋಶಿಯಲ್ ಮೀಡಿಯಾದಲ್ಲಿ ಆಕ್ಷೇಪಾರ್ಹ ಪೋಸ್ಟ್ ಹಾಕಿದ ಹಿನ್ನೆಲೆ ಮಾಜಿ ಸಚಿವ ಸಿಟಿ ರವಿ ವಿರುದ್ಧ ನಗರ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.
ಸಾಗರದ ಆಳವನ್ನಾದರೂ ಅಳೆಯಬಹುದು, ಆದರೆ ರಾಹುಲ್ ಗಾಂಧಿ ಮನಸಿನಲ್ಲಿ ಹಿಂದೂಗಳು ಮತ್ತು ಹಿಂಧೂ ಧರ್ಮದ ಬಗ್ಗೆ ಇರುವ ದ್ವೇಷವನ್ನು ಅಳೆಯಲಾಗದು. “ಹಿಂದೂ ಧರ್ಮದಲ್ಲಿ ಶಕ್ತಿ ಎಂಬ ಪದವಿದೆ, ನಮ್ಮ ಹೋರಾಟ ಶಕ್ತಿಯ ವಿರುದ್ಧ” ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂದು ಟ್ವೀಟ್ ಮಾಡಿದ್ದರು. ಚುನಾವಣಾ ನೀತಿ ಸಂಹಿತೆ ಹಿನ್ನೆಲೆ ದ್ವೇಷದ ಭಾಷಣ ಮಾಡಿದ ಹಿನ್ನೆಲೆ ಚುನಾವಣಾ ಆಯೋಗ ದೂರು ದಾಖಲಿಸಿ ವರದಿ ನೀಡುವಂತೆ ಜಿಲ್ಲಾಮಟ್ಟದ ಚುನಾವಣಾ ಅಧಿಕಾರಿಗಳಿಗೆ ಸೂಚನೆ ನೀಡಿತ್ತು.