ನವದೆಹಲಿ: ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ನೀಡಿರುವ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯಗಳಿಗೆ ಅಧಿಕಾರ ನೀಡುವ ಕುರಿತು ಸಂವಿಧಾನ ತಿದ್ದುಪಡಿ ಮಾಡಲು ಕೇಂದ್ರ ಸರ್ಕಾರ ಗಂಭೀರ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.
ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಚಿವ ತಾವರ್ ಚಂದ್ ಗೆಹ್ಲೋಟ್ ಈ ಬಗ್ಗೆ ಮಾತನಾಡಿ, ಮೀಸಲಾತಿಗೆ ಸಂಬಂಧಿಸಿದಂತೆ ನಿರ್ಧಾರ ಕೈಗೊಳ್ಳಲು ರಾಜ್ಯಗಳಿಗೆ ಅಧಿಕಾರ ನೀಡಲಾಗುವುದು. ಸುಪ್ರೀಂಕೋರ್ಟ್ ತೀರ್ಪಿನಿಂದ ಅಧಿಕಾರ ಮೊಟಕುಗೊಂಡಿದೆ. ಈ ಹಿನ್ನೆಲೆಯಲ್ಲಿ ಉದ್ಯೋಗ ಮತ್ತು ಶಿಕ್ಷಣದಲ್ಲಿ ಮೀಸಲಾತಿ ನೀಡುವ ಕುರಿತು ಇತರೆ ಹಿಂದುಳಿದ ವರ್ಗದ ಪಟ್ಟಿ ಸಿದ್ದಪಡಿಸುವ ಅಧಿಕಾರ ರಾಜ್ಯಗಳಿಗೆ ನೀಡುವ ಕುರಿತು ಚಿಂತನೆ ನಡೆಸಲಾಗಿದೆ ಎಂದು ಹೇಳಿದ್ದಾರೆ.
ಒಬಿಸಿ ಮೀಸಲಾತಿ ವಿಚಾರದಲ್ಲಿ ಮತ್ತೆ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುವುದಿಲ್ಲ. ಕೇಂದ್ರದಿಂದ ಸಂವಿಧಾನಕ್ಕೆ ತಿದ್ದುಪಡಿ ತರಲು ಚಿಂತನೆ ನಡೆದಿದ್ದು, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಲಾಗಿದೆ.