alex Certify ಅಶ್ಲೀಲ ವಿಡಿಯೋ ಪ್ರಕರಣ: ಸಂಕಷ್ಟಕ್ಕೆ ಸಿಲುಕಿದ ನಟಿ ಪೂನಂ ಪಾಂಡೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅಶ್ಲೀಲ ವಿಡಿಯೋ ಪ್ರಕರಣ: ಸಂಕಷ್ಟಕ್ಕೆ ಸಿಲುಕಿದ ನಟಿ ಪೂನಂ ಪಾಂಡೆ

ಪಣಜಿ: ಕರಾವಳಿ ರಾಜ್ಯದಲ್ಲಿ 2020 ರಲ್ಲಿ ಅಶ್ಲೀಲ ವಿಡಿಯೊವನ್ನು ಚಿತ್ರೀಕರಿಸಿದ ಆರೋಪದ ಮೇರೆಗೆ ಮಾಡೆಲ್, ನಟಿ ಪೂನಂ ಪಾಂಡೆ ಮತ್ತು ಆಕೆಯ ಪರಿತ್ಯಕ್ತ ಪತಿ ಸ್ಯಾಮ್ ಬಾಂಬೆ ವಿರುದ್ಧ ಗೋವಾ ಪೊಲೀಸರು ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.

ಅಶ್ಲೀಲ ವಿಡಿಯೊ ಪ್ರಸಾರಕ್ಕೆ ಸಂಬಂಧಿಸಿದ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಕೆನಕೋನ ಜ್ಯುಡಿಷಿಯಲ್ ಪ್ರಥಮ ದರ್ಜೆ ನ್ಯಾಯಾಧೀಶರಿಗೆ ಕಳೆದ ವಾರ ಚಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ಕೆನಕೋನಾ ಪೊಲೀಸ್ ಇನ್ಸ್‌ಪೆಕ್ಟರ್ ಪ್ರವೀಣ್ ಗವಾಸ್ ಮಂಗಳವಾರ ತಿಳಿಸಿದರು.

BIG NEWS: ಜನಸಂಖ್ಯೆ ನಿಯಂತ್ರಣಕ್ಕೆ ಕಾನೂನು ಜಾರಿ ಶೀಘ್ರ; ಕೇಂದ್ರ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಮಹತ್ವದ ಹೇಳಿಕೆ

ಪೂನಂ ಮತ್ತು ಸ್ಯಾಮ್‌ 2020ರ ನವೆಂಬರ್‌ನಲ್ಲಿ ಕೆನಕೋನಾ ಪ್ರದೇಶದ ಸರ್ಕಾರಿ ಸ್ವಾಮ್ಯದ ಚಾಪೋಲಿ ಅಣೆಕಟ್ಟಿನಲ್ಲಿ ಅಶ್ಲೀಲ ವಿಡಿಯೊವನ್ನು ಚಿತ್ರೀಕರಿಸಿ, ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಪ್ರಸಾರ ಮಾಡಿದ್ದರು. ಈ ಆರೋಪದ ಮೇರೆಗೆ ಪ್ರಕರಣ ದಾಖಲಿಸಲಾಗಿದೆ.

ನಂತರ ಇಬ್ಬರನ್ನೂ ಬಂಧಿಸಿ ನಂತರ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಪೊಲೀಸರು 39 ಸಾಕ್ಷಿಗಳ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ, ಪ್ರಕರಣದ ವಿಚಾರಣೆಯ ಸಮಯದಲ್ಲಿ ಅವರ ಹೇಳಿಕೆಗಳನ್ನು ನ್ಯಾಯಾಲಯವು ಪರಿಶೀಲಿಸುತ್ತದೆ ಎಂದು ಗವಾಸ್ ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...