alex Certify ನೈರುತ್ಯ ಶಿಕ್ಷಕರ/ಪದವೀಧರರ ಕ್ಷೇತ್ರಗಳಿಗೆ ಚುನಾವಣಾ ಆಯೋಗದಿಂದ ವೀಕ್ಷಕರ ನೇಮಕ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ನೈರುತ್ಯ ಶಿಕ್ಷಕರ/ಪದವೀಧರರ ಕ್ಷೇತ್ರಗಳಿಗೆ ಚುನಾವಣಾ ಆಯೋಗದಿಂದ ವೀಕ್ಷಕರ ನೇಮಕ

ಬೆಂಗಳೂರು: ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರ ಹಾಗೂ ನೈರುತ್ಯ ಪದವೀಧರರ ಚುನಾವಣಾ ಕ್ಷೇತ್ರಗಳಿಂದ ಕರ್ನಾಟಕ ವಿಧಾನಪರಿಷತ್ತಿಗೆ ನಡೆಯಲಿರುವ ಚುನಾವಣೆಗೆ ಭಾರತ ಚುನಾವಣಾ ಆಯೋಗವು ಐಎಎಸ್ ಅಧಿಕಾರಿಗಳನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಕ ಮಾಡಿದೆ.

ಕರ್ನಾಟಕ ನೈರುತ್ಯ ಪದವೀಧರರ ಕ್ಷೇತ್ರ ಕೊಡಗು ಜಿಲ್ಲೆ, ಚಿಕ್ಕಮಗಳೂರು ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಜಿಲ್ಲೆ, ಶಿವಮೊಗ್ಗ ಜಿಲ್ಲೆ, ದಾವಣಗೆರೆ ಜಿಲ್ಲೆಗಳಿಗೆ ಐಎಎಸ್ ಅಧಿಕಾರಿಯಾದ ಅನಿಲ್ ಕುಮಾರ್ ಅವರನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ಸಹಾಯಕ ಅಧಿಕಾರಿಯಾಗಿ ಮೈಸೂರು ಜಿಲ್ಲೆಯ ತೋಟಗಾರಿಕಾ ಇಲಾಖೆಯ ಉಪ ನಿರ್ದೇಶಕರಾದ ರುದ್ರೇಶ್ ಕೆ. ಅವರನ್ನು ನೇಮಕ ಮಾಡಲಾಗಿದೆ. 72044064565 ಮತ್ತು 9964174107 ದೂರವಾಣಿ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ..

ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರಗಳಾದ ಕೊಡಗು ಜಿಲ್ಲೆ, ಚಿಕ್ಕಮಗಳೂರು ಜಿಲ್ಲೆ, ದಕ್ಷಿಣ ಕನ್ನಡ ಜಿಲ್ಲೆ, ಉಡುಪಿ ಜಿಲ್ಲೆ, ಶಿವಮೊಗ್ಗ ಜಿಲ್ಲೆ, ದಾವಣಗೆರೆ ಜಿಲ್ಲೆಗಳಿಗೆ ಐಎಎಸ್ ಅಧಿಕಾರಿ ಹರ್ಷ ಗುಪ್ತ ಅವರನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ಸಹಾಯಕ ಅಧಿಕಾರಿಯಾಗಿ ಮೈಸೂರು ಕನ್ನಡ ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಡಾ. ಎಂ.ಡಿ. ಸುದರ್ಶನ್ ನೇಮಕ ಮಾಡಲಾಗಿದೆ. 7204294565 ಮತ್ತು 9448244340 ದೂರವಾಣಿ ಸಂಖ್ಯೆಗೆ ಸಂಪರ್ಕಿಸಿ.

ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಗಳಾದ ಮೈಸೂರು ಜಿಲ್ಲೆ, ಮಂಡ್ಯ ಜಿಲ್ಲೆ, ಚಾಮರಾಜನಗರ ಜಿಲ್ಲೆ, ಹಾಸನ ಜಿಲ್ಲೆಗಳಿಗೆ ಐಎಎಸ್ ಅಧಿಕಾರಿ ಡಾ.ರವಿಶಂಕರ್ ಅವರನ್ನು ಚುನಾವಣಾ ವೀಕ್ಷಕರನ್ನಾಗಿ ನೇಮಕ ಮಾಡಲಾಗಿದೆ. ಸಹಾಯಕ ಅಧಿಕಾರಿಯಾಗಿ ಮೈಸೂರು ನಗರದ ಅಬಕಾರಿ ಉಪ ಆಯುಕ್ತ ಎಸ್. ನಾಗರಾಜಪ್ಪ ನೇಮಕ ಮಾಡಲಾಗಿದೆ. 7204214565 ಮತ್ತು 9449597178 ದೂರವಾಣಿ ಸಂಖ್ಯೆಗೆ ಸಂಪರ್ಕಿಸಿ.

No Posts
No Posts

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...