alex Certify ಅ.1 ರಂದು `ಅಂತರರಾಷ್ಟ್ರೀಯ ಹಿರಿಯ ವ್ಯಕ್ತಿಗಳ ದಿನ’ : `ಶತಾಯುಷಿ ಮತದಾರ’ರ ಗೌರವಿಸಲು ಚುನಾವಣಾ ಆಯೋಗ ಸೂಚನೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಅ.1 ರಂದು `ಅಂತರರಾಷ್ಟ್ರೀಯ ಹಿರಿಯ ವ್ಯಕ್ತಿಗಳ ದಿನ’ : `ಶತಾಯುಷಿ ಮತದಾರ’ರ ಗೌರವಿಸಲು ಚುನಾವಣಾ ಆಯೋಗ ಸೂಚನೆ

ಬೆಂಗಳೂರು : ಪ್ರತಿ ವರ್ಷ ಅಕ್ಟೋಬರ್ 1 ರಂದು ವಯಸ್ಸಾದವರು ಸಮಾಜಕ್ಕೆ ನೀಡುವ ಕೊಡುಗೆಗಳನ್ನು ಎತ್ತಿ ತೋರಿಸಲು ಮೀಸಲಿಡಲಾಗಿದೆ. ವಯಸ್ಸಾದ ಜನಸಂಖ್ಯೆಯಲ್ಲಿ ಜಾಗೃತಿ ಮೂಡಿಸಲು ಅಂತರಾಷ್ಟ್ರೀಯ ಹಿರಿಯರ ದಿನವನ್ನು ಸಹ ಆಚರಿಸಲಾಗುತ್ತದೆ.

ಅಕ್ಟೋಬರ್ 1 ರಂದು ಅಂತರರಾಷ್ಟ್ರೀಯ ಹಿರಿಯ ವ್ಯಕ್ತಿಗಳ ದಿನವನ್ನಾಗಿ ವಿಶ್ವದಾದ್ಯಂತ ಆಚರಿಸಲಾಗುತ್ತಿದ್ದು, ಭಾರತ ಚುನಾವಣಾ ಆಯೋಗವು ಈ ಬಗ್ಗೆ ವಿಶೇಷವಾಗಿ ಆಚರಿಸಲು ನಿರ್ಧರಿಸಿದೆ. ಈ ಸಂಬಂಧ 100+ ವರ್ಷ ಪೂರೈಸಿದ ಶತಾಯುಷಿ ಮತದಾರರ ಬಗ್ಗೆ ಪರಿಶೀಲಿಸಿ, ಅವರ ಹಿನ್ನೆಲೆ ಗುರುತಿಸಿ, ಸಂಬಂಧಪಟ್ಟ ಅಧಿಕಾರಿಗಳು ಗೌರವಯುತವಾಗಿ ಅಭಿನಂದಿಸುವ ಕುರಿತು ಸೂಕ್ತ ನಿರ್ದೇಶನಗಳನ್ನು ನೀಡಿದೆ.

ಎಲ್ಲಾ ಜಿಲ್ಲಾ ಚುನಾವಣಾಧಿಕಾರಿಗಳು ಹಾಗೂ ಜಿಲ್ಲಾಧಿಕಾರಿಗಳು ಮತ್ತು ಎಲ್ಲಾ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಹಾಗೂ ಜಿಲ್ಲಾ SVEEP ನೋಡಲ್ ಅಧಿಕಾರಿಗಳು ಆಕ್ಟೋಬರ್ 1 ರಂದು ಅಂತರರಾಷ್ಟ್ರೀಯ ಹಿರಿಯ ವ್ಯಕ್ತಿಗಳ ದಿನವನ್ನು ಆಚರಣೆ ಮಾಡಿ, ಶತಾಯುಷಿ ಮತದಾರರಿಗೆ ಸಂಬಂಧಪಟ್ಟ ಅಧಿಕಾರಿಗಳು ಗೌರವಯುತವಾಗಿ ಆಭಿನಂದಿಸುವುದು ಹಾಗೂ ಅತ್ಯುತ್ತಮ ಗುಣಮಟ್ಟದ ಛಾಯಾಚಿತ್ರಗಳನ್ನು ತಮ್ಮ-ತಮ್ಮ ಅಧಿಕೃತ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡುವುದು ಮತ್ತು ಅತ್ಯುತ್ತಮ ಗುಣಮಟ್ಟದ ಛಾಯಾಚಿತ್ರ (High Resolution Photo) ಗಳ ಶೀರ್ಷಿಕೆ ಮತ್ತು ಅಡಿಬರಹದೊಂದಿಗೆ, Video clip ಕೂಡ ಚಿತ್ರೀಕರಿಸಿ ವಿವರವಾದ ಮಾಹಿತಿಯನ್ನು Consveep@gmail.com ಗೆ ಕಳುಹಿಸುವಂತೆ ಕೋರಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...