ಸೆಪ್ಟೆಂಬರ್ 17 ರಂದು ಸೂರ್ಯ ಕನ್ಯಾರಾಶಿಗೆ ಪ್ರವೇಶಿಸಿದ್ದಾನೆ. ಸೂರ್ಯನ ರಾಶಿ ಬದಲಾವಣೆಯನ್ನು ಸಂಕ್ರಾಂತಿ ಎಂದು ಕರೆಯಲಾಗುತ್ತದೆ. ಕನ್ಯಾ ರಾಶಿಗೆ ಸೂರ್ಯ ಪ್ರವೇಶ ಮಾಡಿದ್ದರಿಂದ ಇದನ್ನು ಕನ್ಯಾ ಸಂಕ್ರಾಂತಿ ಎಂದು ಕರೆಯಲಾಗುತ್ತದೆ. ಅಕ್ಟೋಬರ್ 18 ರವರೆಗೆ ಸೂರ್ಯ ಕನ್ಯಾ ರಾಶಿಯಲ್ಲಿ ಇರಲಿದ್ದಾನೆ. ಕನ್ಯಾ ರಾಶಿಗೆ ಸೂರ್ಯನ ಪ್ರವೇಶದಿಂದ ಅನೇಕ ರಾಶಿಗಳ ಮೇಲೆ ಪರಿಣಾಮ ಬೀರಲಿದೆ.
ಮೇಷ : ಸೂರ್ಯನ ರಾಶಿ ಬದಲಾವಣೆಯಿಂದ ಮೇಷ ರಾಶಿಯವರಿಗೆ ಒಳ್ಳೆಯ ಫಲ ಪ್ರಾಪ್ತಿಯಾಗಲಿದೆ. ಮೇಷ ರಾಶಿಯವರು ಎಲ್ಲ ಅಡೆತಡೆಗಳಿಂದ ಮುಕ್ತರಾಗಲಿದ್ದಾರೆ. ಬಾಕಿ ಉಳಿದಿರುವ ಕೆಲಸ ಪೂರ್ಣಗೊಳ್ಳಲಿವೆ. ವೃತ್ತಿ ಜೀವನದಲ್ಲಿ ಯಶಸ್ಸು ಸಿಗಲಿದೆ. ಕೌಟುಂಬಿಕ ಸುಖ ಪ್ರಾಪ್ತಿಯಾಗಲಿದೆ.
ಕರ್ಕ : ಕರ್ಕ ರಾಶಿಯವರಿಗೂ ಈ ದಿನ ಒಳ್ಳೆಯದಾಗಿರಲಿದೆ. ಆರೋಗ್ಯ ಸಮಸ್ಯೆ ಬಗೆಹರಿಯಲಿದೆ. ಶಕ್ತಿ ಹೆಚ್ಚಾಗಲಿದೆ. ಗೌರವ ಜಾಸ್ತಿಯಾಗಲಿದೆ.
ತುಲಾ : ತುಲಾ ರಾಶಿಯವರಿಗೆ ಈ ಸಂದರ್ಭದಲ್ಲಿ ದೂರದ ಪ್ರಯಾಣಕ್ಕೆ ಹೋಗುವ ಅವಕಾಶ ಸಿಗಲಿದೆ. ಸಂಗಾತಿಗೆ ಕೆಲಸದಲ್ಲಿ ಯಶಸ್ಸು ಪ್ರಾಪ್ತಿಯಾಗಲಿದೆ. ಹಾಗೆಯೇ ಈ ಸಂದರ್ಭದಲ್ಲಿ ಶತ್ರುಗಳಿಂದ ದೂರವಿರುವುದು ಒಳ್ಳೆಯದು.
ವೃಶ್ಚಿಕ : ವೃಶ್ಚಿಕ ರಾಶಿಯವರಿಗೂ ಈ ಅವಧಿಯಲ್ಲಿ ಸಕಾರಾತ್ಮಕ ಫಲಿತಾಂಶ ಪ್ರಾಪ್ತಿಯಾಗಲಿದೆ. ಆದಾಯದಲ್ಲಿ ಹೆಚ್ಚಳವಾಗಲಿದೆ. ಅದೃಷ್ಟ ಬದಲಾಗಲಿದೆ.
ಧನು : ಧನು ರಾಶಿಯವರಿಗೆ ಈ ಸಮಯ ಮಂಗಳಕರವಾಗಿರಲಿದೆ. ಹಣಕಾಸಿನ ಸಮಸ್ಯೆ ಕಡಿಮೆಯಾಗಲಿದೆ. ಗೌರವ ಪ್ರಾಪ್ತಿಯಾಗಲಿದೆ. ಕುಟುಂಬದಲ್ಲಿ ಸಂತೋಷ ಮನೆ ಮಾಡಲಿದೆ.
ಮಕರ : ಸೂರ್ಯನ ರಾಶಿ ಬದಲಾವಣೆಯಿಂದ ಈ ರಾಶಿಯವರ ಅದೃಷ್ಟ ಬದಲಾಗಲಿದೆ. ಪ್ರಯಾಣದ ಯೋಗವಿದೆ. ಕೋಪವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಒಳ್ಳೆಯದು.