ಭುವನೇಶ್ವರ: ಒಡಿಶಾದ ಮಯೂರ್ ಭಂಜ್ ಆಸ್ಪತ್ರೆಯಲ್ಲಿ ಸೋಂಕಿತರನ್ನು ಬೆತ್ತಲಾಗಿ ಮಲಗಿಸಿ ಚಿಕಿತ್ಸೆ ನೀಡಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ.
ಮೂಲ ಸೌಕರ್ಯವಿಲ್ಲದೆ ಕೋವಿಡ್ ಆಸ್ಪತ್ರೆಯಲ್ಲಿ ರೋಗಿಗಳು ನೆಲದ ಮೇಲೆ ಮಲಗಿದ್ದಾರೆ. ಕೆಲವರು ಬೆತ್ತಲಾಗಿ ನೆಲದ ಮೇಲೆ ಮಲಗಿಕೊಂಡಿರುವುದು ಕಂಡುಬಂದಿದೆ. ಈ ದೃಶ್ಯಗಳ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಕೋವಿಡ್ ಆಸ್ಪತ್ರೆಯಲ್ಲಿ ಮೂಲಸೌಕರ್ಯದ ಕೊರತೆ ಕಂಡುಬಂದಿದ್ದು, ಕೊರೊನಾ ಸೋಂಕಿತರಿಗೆ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ ಎಂಬ ದೂರುಗಳು ಕೇಳಿಬಂದಿವೆ. ಹೆಚ್ಚುವರಿ ವಿಭಾಗೀಯ ವೈದ್ಯಕೀಯ ಅಧಿಕಾರಿ ಎಸ್.ಆರ್. ದಾಸ್ ಘಟನೆ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಕೋವಿಡ್ ಆಸ್ಪತ್ರೆಯಲ್ಲಿ ನಡೆದಿದೆ ಎನ್ನಲಾದ ಘಟನೆಯ ಬಗ್ಗೆ ಮಾಹಿತಿ ಇಲ್ಲ. ೀ ಬಗ್ಗೆ ಮಾಹಿತಿ ಪಡೆದು ತನಿಖೆಗೆ ಆದೇಶಿಸಲಾಗಿದೆ. ವರದಿ ನಂತರ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.