alex Certify ಹಾಕಿ ವಿಶ್ವಕಪ್ ನಲ್ಲಿ ಭಾರತ ಗೆದ್ದರೆ ಆಟಗಾರರಿಗೆ ಬಂಪರ್ ಕೊಡುಗೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಹಾಕಿ ವಿಶ್ವಕಪ್ ನಲ್ಲಿ ಭಾರತ ಗೆದ್ದರೆ ಆಟಗಾರರಿಗೆ ಬಂಪರ್ ಕೊಡುಗೆ

ಭಾರತದ ಆತಿಥ್ಯದಲ್ಲಿ ಜನವರಿ 13 ರಿಂದ ಒಡಿಶಾದಲ್ಲಿ ಹಾಕಿ ವಿಶ್ವಕಪ್ ಆರಂಭವಾಗಲಿದ್ದು, ಇದಕ್ಕಾಗಿ ಈಗಾಗಲೇ ಸಕಲ ಸಿದ್ಧತೆಗಳು ನಡೆದಿವೆ. ದೇಶದ ಅತಿ ದೊಡ್ಡ ಹಾಕಿ ಕ್ರೀಡಾಂಗಣ ಸಹ ಇದಕ್ಕಾಗಿ ಉದ್ಘಾಟನೆಗೊಂಡಿದೆ.

ರೂರ್ಕೆಲಾದಲ್ಲಿರುವ ಬಿರ್ಸಾ ಮುಂಡ ಅಂತರಾಷ್ಟ್ರೀಯ ಕ್ರೀಡಾಂಗಣವನ್ನು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಗುರುವಾರ ಉದ್ಘಾಟಿಸಿದ್ದು, ಈ ವೇಳೆ ಭಾರತೀಯ ಆಟಗಾರರಿಗೆ ಬಂಪರ್ ಕೊಡುಗೆ ಘೋಷಿಸಿದ್ದಾರೆ.

ಈ ವಿಶ್ವ ಕಪ್ ನಲ್ಲಿ ಭಾರತ ಹಾಕಿ ತಂಡ ಗೆದ್ದರೆ ಪ್ರತಿ ಆಟಗಾರನಿಗೆ ತಲಾ ಒಂದು ಕೋಟಿ ರೂಪಾಯಿ ಬಹುಮಾನ ನೀಡುವುದಾಗಿ ನವೀನ್ ಪಟ್ನಾಯಕ್ ಘೋಷಿಸಿದ್ದಾರೆ. 1975 ರಲ್ಲಿ ಭಾರತ ವಿಶ್ವ ಕಪ್ ಗೆದ್ದಿದ್ದು ಆ ಬಳಿಕ ಗೆಲವು ಸಾಧಿಸಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...