alex Certify ಆಸ್ಪತ್ರೆಯಲ್ಲೇ ರೋಗಿಗಳ ಮೇಲೆ ವೈದ್ಯನಿಂದ ಲೈಂಗಿಕ ದೌರ್ಜನ್ಯ: ಸಂಬಂಧಿಕರಿಂದ ಥಳಿತಕ್ಕೊಳಗಾದ ಡಾಕ್ಟರ್ ಐಸಿಯುಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಸ್ಪತ್ರೆಯಲ್ಲೇ ರೋಗಿಗಳ ಮೇಲೆ ವೈದ್ಯನಿಂದ ಲೈಂಗಿಕ ದೌರ್ಜನ್ಯ: ಸಂಬಂಧಿಕರಿಂದ ಥಳಿತಕ್ಕೊಳಗಾದ ಡಾಕ್ಟರ್ ಐಸಿಯುಗೆ ದಾಖಲು

ಕಟಕ್: ಒಡಿಶಾದ ಕಟಕ್‌ ನ ಆಸ್ಪತ್ರೆಯೊಂದರಲ್ಲಿ ವೈದ್ಯನೊಬ್ಬ ಮಹಿಳಾ ರೋಗಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸಂಬಂಧಿಕರು ಥಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಆಗಸ್ಟ್ 11 ರಂದು ಒಡಿಶಾದ ಅತ್ಯಂತ ಪ್ರತಿಷ್ಠಿತ ಆರೋಗ್ಯ ಕೇಂದ್ರಗಳಲ್ಲಿ ಒಂದಾದ SCB ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಈ ಘಟನೆ ಸಂಭವಿಸಿದೆ. ಆರೋಪಿ ವೈದ್ಯ ಹೃದ್ರೋಗ ವಿಭಾಗದಲ್ಲಿ ಕೆಲಸ ಮಾಡುತ್ತಾರೆ.

ಪೊಲೀಸರ ಪ್ರಕಾರ, ರೋಗಿಗಳು ಎಲೆಕ್ಟ್ರೋಕಾರ್ಡಿಯೋಗ್ರಾಮ್ ಪರೀಕ್ಷೆಗೆ(ಇಸಿಜಿ) ಆಸ್ಪತ್ರೆಗೆ ಬಂದಿದ್ದ ವೇಳೆ  ವೈದ್ಯ ರೋಗಿಗಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂದು ಅವರ ಸಂಬಂಧಿಕರು ಆರೋಪಿಸಿದ್ದಾರೆ. ನಂತರ ಅವರು ವೈದ್ಯನನ್ನು ಥಳಿಸಿದ್ದಾರೆ. ವೈದ್ಯರನ್ನು ಅದೇ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ(ಐಸಿಯು) ದಾಖಲಿಸಲಾಗಿದೆ.

ಮಂಗಲಬಾಗ್ ಪೊಲೀಸ್ ಠಾಣೆಯಲ್ಲಿ ಲಿಖಿತ ದೂರು ದಾಖಲಿಸಿದ ನಂತರ ವಿಷಯ ಬೆಳಕಿಗೆ ಬಂದಿದೆ. ಇಬ್ಬರು ರೋಗಿಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ವೈದ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಪೊಲೀಸ್ ಉಪ ಆಯುಕ್ತ ಅನಿಲ್ ಮಿಶ್ರಾ ತಿಳಿಸಿದ್ದಾರೆ.

ರೋಗಿಗಳು ಮತ್ತು ಆರೋಪಿ ಆಸ್ಪತ್ರೆಗೆ ದಾಖಲಾಗಿರುವುದರಿಂದ, ಅವರು ಚೇತರಿಸಿಕೊಂಡ ನಂತರ ಅವರ ಹೇಳಿಕೆಗಳನ್ನು ದಾಖಲಿಸಲಾಗುತ್ತದೆ ಎಂದು ಹೇಳಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...