ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ಒಡಿಶಾ ಸರ್ಕಾರ 5 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ. ಗಾಯಗೊಂಡವರಿಗೆ ಒಂದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಹೇಳಿದ್ದಾರೆ.
ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು, ರೈಲು ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 10 ಲಕ್ಷ ರೂಪಾಯಿ ಹಾಗೂ ಗಂಭೀರವಾಗಿ ಗಾಯಗೊಂಡವರಿಗೆ ತಲಾ 2 ಲಕ್ಷ ರೂಪಾಯಿ ಮತ್ತು ಸಣ್ಣ ಪುಟ್ಟ ಗಾಯಗಳಾದವರಿಗೆ 50,000 ರೂ. ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.
ರೈಲು ದುರಂತದಲ್ಲಿ ಸಾವನ್ನಪ್ಪಿದವರ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50,000 ರೂ. ಕೇಂದ್ರ ಸರ್ಕಾರ ನೀಡಲಿದೆ.