ಭುವನೇಶ್ವರ: ಹತ್ಯೆಗೀಡಾದ ಆರೋಗ್ಯ ಸಚಿವ ನಬಾ ಕಿಶೋರ್ ದಾಸ್ ಅವರ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ಗುಂಡು ಹಾರಿಸಿದ ನಂತರ “ಕಾರ್ಡಿಯೋಜೆನಿಕ್ ಶಾಕ್” ನಿಂದ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.
ಒಡಿಶಾ ಪೊಲೀಸರು ಬುಧವಾರ ಮಾಹಿತಿ ನೀಡಿದ್ದಾರೆ. ಆರೋಪಿ ವಜಾಗೊಂಡ ಹೆಚ್ಚುವರಿ ಸಬ್ ಇನ್ಸ್ ಪೆಕ್ಟರ್ ಗೋಪಾಲ್ ದಾಸ್ ಅವರನ್ನು ನಾಲ್ಕು ದಿನಗಳ ಪೊಲೀಸ್ ಕಸ್ಟಡಿಗೆ ನೀಡಲಾಗಿದ್ದು, ಸಿಐಡಿ ವಿಚಾರಣೆ ನಡೆಸುತ್ತಿದೆ.
ನವದೆಹಲಿಯ ಕೇಂದ್ರೀಯ ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರಿಂದ ಆರೋಪಿ ವಿಧಿವಿಜ್ಞಾನ ಮಾನಸಿಕ ಮೌಲ್ಯಮಾಪನ ನಡೆಸಲಾಗುವುದು. ಮರಣೋತ್ತರ ಪರೀಕ್ಷೆಯ ವರದಿಯು ಗುಂಡೇಟಿನ ಗಾಯಗಳ ಪರಿಣಾಮವಾಗಿ ಕಾರ್ಡಿಯೋಜೆನಿಕ್ ಆಘಾತದಿಂದ ಸಾವು ಸಂಭವಿಸಿದೆ ಎಂದು ಸೂಚಿಸುತ್ತದೆ ಎಂದು ಪೊಲೀಸರು ಹೇಳಿದ್ದಾರೆ.
60 ವರ್ಷದ ಸಚಿವರು ತಮ್ಮ ತವರು ಜಿಲ್ಲೆಯ ಝಾರ್ಸುಗುಡಾದ ಬ್ರಜರಾಜ್‌ನಗರದ ಗಾಂಧಿ ಚೌಕ್‌ನಲ್ಲಿ ಜನವರಿ 29 ರಂದು ಅಧಿಕೃತ ಕಾರ್ಯಕ್ರಮಕ್ಕಾಗಿ ಅಲ್ಲಿಗೆ ಹೋದಾಗ ಎಎಸ್‌ಐ ಗುಂಡು ಹಾರಿಸಿದ್ದರು. ನಂತರ ಭುವನೇಶ್ವರದ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು.