ಭುವನೇಶ್ವರ: ವಿವಿಧ ಪ್ರಕರಣಗಳಲ್ಲಿ ಕಳೆದ ಹಲವು ವರ್ಷಗಳಿಂದ ತಲೆಮರೆಸಿಕೊಂಡಿದ್ದ 4,945 ಆರೋಪಿಗಳನ್ನು ಒಡಿಶಾ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ತಿಳಿದುಬಂದಿದೆ.
ವಿಚಾರಣೆಯಿಂದ ತಪ್ಪಿಸಿಕೊಳ್ಳುತ್ತಿರುವ ತಲೆಮರೆಸಿಕೊಂಡವರನ್ನು ಕೋರ್ಟ್ ಗೆ ಹಾಜರುಪಡಿಸಲು ಜಾಮೀನು ರಹಿತ ವಾರೆಂಟ್ ಗಳನ್ನು ಜಾರಿಗೊಳಿಸಲು ಆಗಸ್ಟ್ 16ರಿಂದ 25ರ ವರೆಗೆ ಹತ್ತು ದಿನಗಳ ಕಾಲ ಒಡಿಶಾ ಪೊಲೀಸರು ವಿಶೇಷ ಕಾರ್ಯಾಚರಣೆ ನಡೆಸಿದ್ದರು.
ಬಂಧಿತರಲ್ಲಿ ಕಳೆದ ಏಳು ವರ್ಷಗಳಿಂದ ಬಂಧನದಿಂದ ತಪ್ಪಿಸಿಕೊಳ್ಳುತ್ತಿದ್ದ ಪುರಿ ಜಿಲ್ಲೆಯ ಪಿಪಿಲಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಕೊಲೆ ಪ್ರಕರಣದ ಆರೋಪಿಗಳು ಕೂಡ ಸೇರಿದ್ದಾರೆ.