ಭುವನೇಶ್ವರ್: ಬಿಟೆಕ್, ಎಂಬಿಎ ಸೇರಿದಂತೆ ಕನಿಷ್ಠ 15 ಕೋರ್ಸ್ ಗಳಲ್ಲಿ ಕಲಿಯುವ ಅರ್ಹ ಎಸ್ಸಿ ಮತ್ತು ಎಸ್ಟಿ ವಿದ್ಯಾರ್ಥಿಗಳಿಗೆ ನೀಡಲಾಗುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನವನ್ನು ಒಡಿಶಾ ಸರ್ಕಾರ ಕಡಿತಗೊಳಿಸಿದೆ.
ಕಳೆದ ಶೈಕ್ಷಣಿಕ ಅವಧಿಯಲ್ಲಿ 60 ಸಾವಿರ ರೂ. ವರೆಗೆ ವಿದ್ಯಾರ್ಥಿ ವೇತನ ನೀಡಲಾಗುತ್ತಿದ್ದು, 2020 -21 ನೇ ಶೈಕ್ಷಣಿಕ ಸಾಲಿನಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಭಿವೃದ್ಧಿ ವಿಭಾಗದ ನಿರ್ಣಯದ ಪ್ರಕಾರ, 25 ಸಾವಿರ ರೂ. ವಿದ್ಯಾರ್ಥಿ ವೇತನ ನೀಡಲಾಗುವುದು.
ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಹಿಂದಿನ ವರ್ಷಗಳಲ್ಲಿ 26,500 ರೂ. ವಿದ್ಯಾರ್ಥಿವೇತನ ನೀಡಲಾಗುತ್ತಿತ್ತು. ಈ ಮೊತ್ತವನ್ನು ಕೇವಲ 3500 ರೂಪಾಯಿಗೆ ಇಳಿಕೆ ಮಾಡಲಾಗಿದೆ. ಎಂಟೆಕ್ ವಿದ್ಯಾರ್ಥಿಗಳಿಗೆ 66,000 ರೂ., ಎಂಬಿಎಗೆ 65,000 ರೂ., ಹೋಟೆಲ್ ಮ್ಯಾನೇಜ್ಮೆಂಟ್ ಗೆ 45,000 ರೂ. ಮತ್ತು ಎಂಸಿಎಗೆ 40,000 ರೂ. ವಿದ್ಯಾರ್ಥಿವೇತನ ನೀಡಲಾಗುತ್ತಿತ್ತು. ಈ ಎಲ್ಲಾ ವಿದ್ಯಾರ್ಥಿ ವೇತನದ ಮೊತ್ತವನ್ನು ಕಡಿಮೆ ಮಾಡಲಾಗಿದೆ. 30 ರಿಂದ 60 ಸಾವಿರ ರೂಪಾಯಿವರೆಗಿನ ವಿದ್ಯಾರ್ಥಿವೇತನವನ್ನು 12 ರಿಂದ 30 ಸಾವಿರ ರೂ.ವರೆಗೆ ಇಳಿಕೆ ಮಾಡಲಾಗಿದೆ.