ಶುಕ್ರವಾರ ಒಡಿಶಾದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ (train accident) ಮೃತಪಟ್ಟವರ ಸಂಖ್ಯೆ 207 ಕ್ಕೆ ಏರಿಕೆಯಾಗಿದೆ, 900 ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ರಕ್ಷಣಾ ಕಾರ್ಯ (Defense work) ಭರದಿಂದ ಸಾಗುತ್ತಿದ್ದು, ಸಾವಿನ ಸಂಖ್ಯೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.
ರೈಲು ದುರಂತದಲ್ಲಿ ಮೃತಪಟ್ಟವರ ಬಗ್ಗೆ ಮಾಹಿತಿ ಪಡೆಯಲು ಸಹಾಯವಾಣಿ (helpline) ಸ್ಥಾಪಿಸಲಾಗಿದ್ದು, ಈ ಕೆಳಕಂಡ ಸಹಾಯವಾಣಿ ಸಂಪರ್ಕಿಸಲು ಕೋರಲಾಗಿದೆ.
ಶಾಲಿಮಾರ್-9332392339
ಖರಗ್ಪುರ-8972073925
ಬಂಗಾರಪೇಟೆ – 08153 255253
ಬಾಲಸೋರ್- 8249591559
ಹೌರಾ- 033-26382217
ಕುಪ್ಪಂ – 8431403419
ಬೆಂಗಳೂರು – 080-22356409
ವಿಶ್ವೇಶ್ವರ ಟರ್ಮಿನಲ್ ಬೈಯಪ್ಪನಹಳ್ಳಿ : 09606005129
ಕೆಆರ್ ಪುರಂ – 88612 03980
ಒಡಿಶಾದ ಬಾಲಸೋರ್ ಪ್ರದೇಶದಲ್ಲಿ ನಿನ್ನೆ ಭೀಕರ ರೈಲು ಅಪಘಾತ (railway accident) ನಡೆದಿದ್ದು, ಗೂಡ್ಸ್ ರೈಲಿಗೆ ಎಕ್ಸ್ಪ್ರೆಸ್ ರೈಲು ಡಿಕ್ಕಿ ಹೊಡೆದು ಮೃತಪಟ್ಟವರ ಸಂಖ್ಯೆ 207 ಕ್ಕೆ ಏರಿಕೆಯಾಗಿದೆ.
ರೈಲು ಅಪಘಾತದಲ್ಲಿ ಮೃತಪಟ್ಟವರಿಗೆ ಹಾಗೂ ಗಾಯಾಳುಗಳಿಗೆ ಕೇಂದ್ರ ರೈಲ್ವೆ ಇಲಾಖೆ (Central Railway Department) ಪರಿಹಾರ ಘೋಷಣೆ ಮಾಡಿದ್ದು, ಮೃತರ ಕುಟುಂಬಕ್ಕೆ 10 ಲಕ್ಷ ಹಾಗೂ ಗಾಯಗೊಂಡವರಿಗೆ 2 ಲಕ್ಷ ರೂ. ಪರಿಹಾರ ಘೋಷಿಸಿದೆ.