ಶುಕ್ರವಾರ ಸಂಜೆ ಒಡಿಶಾದ ಬಾಲಸೋರ್ ಜಿಲ್ಲೆ ಬಹನಾಗ ರೈಲು ನಿಲ್ದಾಣದಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ 200 ಕ್ಕೂ ಹೆಚ್ಚು ಪ್ರಯಾಣಿಕರು ಸಾವನ್ನಪ್ಪಿದ್ದು, ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಶನಿವಾರ ಶೋಕಾಚರಣೆಯ ದಿನ ಘೋಷಿಸಿದ್ದಾರೆ.
ಒಡಿಶಾದ ಬಾಲಸೋರ್‌ನಲ್ಲಿ ಶುಕ್ರವಾರ ಸಂಭವಿಸಿದ ಭೀಕರ ರೈಲು ಅಪಘಾತದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಶನಿವಾರ ಒಂದು ದಿನದ ಶೋಕಾಚರಣೆಗೆ ಆದೇಶಿಸಿದ್ದಾರೆ. ಜೂನ್ 3 ರಂದು ರಾಜ್ಯದಾದ್ಯಂತ ಯಾವುದೇ ಆಚರಣೆ ನಡೆಯುವುದಿಲ್ಲ ಎಂದು ಒಡಿಶಾದ ಮಾಹಿತಿ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಟ್ವೀಟ್ ಮಾಡಿದೆ.
ಒಡಿಶಾ ರೈಲು ಅಪಘಾತದ ನಂತರ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳ ಭಾಗವಾಗಿ ರಕ್ತದಾನ ಮಾಡಲು ಜನರು ಮುಂದಾಗಿದ್ದು, ಮಾನವೀಯತೆ ತೋರಿದ್ದಾರೆ. ರೈಲು ಅಪಘಾತದಲ್ಲಿ ಗಾಯಗೊಂಡವರಿಗೆ ರಕ್ತದಾನ ಮಾಡಲು ರಕ್ತದಾನಿಗಳು ಭದ್ರಕ್‌ನ ಜಿಲ್ಲಾ ಕೇಂದ್ರ ಆಸ್ಪತ್ರೆಯಲ್ಲಿ ಸೇರಿದ್ದಾರೆ.
ಒಡಿಶಾದ ಬಾಲಸೋರ್‌ನಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಸಾವಿನ ಸಂಖ್ಯೆ 207 ಕ್ಕೆ ಏರಿದೆ. 900 ಮಂದಿ ಗಾಯಗೊಂಡಿದ್ದಾರೆ” ಎಂದು ಒಡಿಶಾ ಮುಖ್ಯ ಕಾರ್ಯದರ್ಶಿ ಪ್ರದೀಪ್ ಜೆನಾ ಖಚಿತಪಡಿಸಿದ್ದಾರೆ.