ಭುವನೇಶ್ವರ್: ಒಡಿಶಾ ರೈಲು ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 288 ಕ್ಕೆ ಏರಿಕೆಯಾಗಿದ್ದು, ಒಂದು ಸಾವಿರಕ್ಕೂ ಅಧಿಕ ಜನ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.
ನಿನ್ನೆ ಸಂಜೆ 7 ಗಂಟೆ ಸುಮಾರಿಗೆ ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗ ನಿಲ್ದಾಣದ ಬಳಿ ಮೂರು ರೈಲುಗಳ ನಡುವೆ ಡಿಕ್ಕಿ ಸಂಭವಿಸಿತ್ತು.
747 ಜನ ಗಂಭೀರವಾಗಿ ಗಾಯಗೊಂಡಿದ್ದಾರೆ. 56 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ ಎಂದು ಭಾರತೀಯ ರೈಲ್ವೆ ಹೇಳಿಕೆ ಬಿಡುಗಡೆ ಮಾಡಿದೆ. ಮಾರ್ಗದಲ್ಲಿ ‘ಕವಚ’ ವಿರೋಧಿ ಘರ್ಷಣೆ ವ್ಯವಸ್ಥೆಯ ಅನುಪಸ್ಥಿತಿಯಿಂದ ಸಂಭವಿಸಿದ ಕೋರಮಂಡಲ್ ಎಕ್ಸ್‌ಪ್ರೆಸ್ ಅಪಘಾತದ ನಂತರ, ರೈಲ್ವೇಯು ಘಟನೆಯ ಬಗ್ಗೆ ಉನ್ನತ ಮಟ್ಟದ ತನಿಖೆಯನ್ನು ಪ್ರಾರಂಭಿಸಿದೆ ಆಗ್ನೇಯ ರೈಲ್ವೆ ಸುರಕ್ಷತಾ ಆಯುಕ್ತರ ನೇತೃತ್ವದಲ್ಲಿ ತನಿಖೆ ನಡೆಯಲಿದೆ.