ನವದೆಹಲಿ: ವಿಶ್ವ ಹವಾಮಾನ ಕ್ರಿಯಾ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಈ ವಾರ ಎರಡು ದಿನಗಳ ದುಬೈ ಪ್ರವಾಸ ಕೈಗೊಳ್ಳಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ) ಭಾನುವಾರ ಪ್ರಕಟಿಸಿದೆ.
ಯುನೈಟೆಡ್ ಅರಬ್ ಎಮಿರೇಟ್ಸ್ ಅಧ್ಯಕ್ಷ ಮತ್ತು ಅಬುಧಾಬಿ ಆಡಳಿತಗಾರ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರ ಆಹ್ವಾನದ ಮೇರೆಗೆ ಮೋದಿ ನವೆಂಬರ್ 30 ರಿಂದ ಡಿಸೆಂಬರ್ 1 ರವರೆಗೆ ದುಬೈಗೆ ಭೇಟಿ ನೀಡುತ್ತಿದ್ದಾರೆ.
ವಿಶ್ವ ಹವಾಮಾನ ಕ್ರಿಯಾ ಶೃಂಗಸಭೆಯು ಹವಾಮಾನ ಬದಲಾವಣೆ ಕುರಿತ ವಿಶ್ವಸಂಸ್ಥೆಯ ಚೌಕಟ್ಟು ಸಮಾವೇಶದ (ಯುಎನ್ಎಫ್ಸಿಸಿಸಿ) ಪಕ್ಷಗಳ 28 ನೇ ಸಮ್ಮೇಳನದ (ಸಿಒಪಿ -28) ಉನ್ನತ ಮಟ್ಟದ ವಿಭಾಗವಾಗಿದೆ. ಯುಎಇ ಅಧ್ಯಕ್ಷತೆಯಲ್ಲಿ ನವೆಂಬರ್ 28 ರಿಂದ ಡಿಸೆಂಬರ್ 12 ರವರೆಗೆ ದುಬೈನಲ್ಲಿ ಸಿಒಪಿ -28 ನಡೆಯಲಿದೆ.