alex Certify BIG BREAKING: ಶಾರ್ಟ್ ಸರ್ಕ್ಯೂಟ್ ನಿಂದ ಪತ್ರಿಕಾ ಕಚೇರಿಗೆ ಭಾರಿ ಬೆಂಕಿ, ಅಪಾರ ಹಾನಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG BREAKING: ಶಾರ್ಟ್ ಸರ್ಕ್ಯೂಟ್ ನಿಂದ ಪತ್ರಿಕಾ ಕಚೇರಿಗೆ ಭಾರಿ ಬೆಂಕಿ, ಅಪಾರ ಹಾನಿ

ಬೆಂಗಳೂರು: ಪತ್ರಿಕಾ ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ಕಚೇರಿಯ ಬಹುಭಾಗ ಹಾನಿಯಾಗಿದೆ.

ಬೆಂಗಳೂರು ರಾಜಾಜಿನಗರದಲ್ಲಿರುವ ಪತ್ರಿಕಾ ಕಚೇರಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ತಗುಲಿದೆ. ಈ ಸಂದರ್ಭದಲ್ಲಿ ಕಚೇರಿಯಲ್ಲಿ ಯಾವುದೇ ಸಿಬ್ಬಂದಿ ಇರಲಿಲ್ಲವೆನ್ನಲಾಗಿದೆ. ಬೆಂಕಿ ತಗುಲಿದ ಮಾಹಿತಿ ದೊರೆತ ಕೂಡಲೇ ಅಗ್ನಿಶಾಮಕ ಸಿಬ್ಬಂದಿ ಧಾವಿಸಿ ಬಂದು ಬೆಂಕಿಯನ್ನು ನಂದಿಸಿದ್ದಾರೆ.

ರಾಜಾಜಿನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಭಾರೀ ಬೆಂಕಿಯಿಂದಾಗಿ ಕಚೇರಿಯ ಬಹುಭಾಗ ಸುಟ್ಟು ಕರಕಲಾಗಿದೆ ಎಂದು ಹೇಳಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...