
ಬೆಂಗಳೂರು: ವರ್ಗಾವಣೆಗೆ ಡೋಂಟ್ ಕೇರ್ ಎಂದ ಅಧಿಕಾರಿಗಳಿಗೆ ಗೇಟ್ ಪಾಸ್ ನೀಡಲಾಗಿದೆ. ಪಂಚಾಯತ್ ರಾಜ್ ಇಲಾಖೆಯ 27 ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಗ್ರಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆ ಪ್ರತ್ಯೇಕ ಆದೇಶ ಹೊರಡಿಸಿದೆ. ವರ್ಗಾವಣೆಯ ಬಳಿಕ ಹುದ್ದೆಗಳಿಗೆ ವರದಿ ಮಾಡಿಕೊಳ್ಳದೆ ಕರ್ತವ್ಯ ಲೋಪ ಎಸಗಿದ ಹಿನ್ನೆಲೆಯಲ್ಲಿ ಸೇವೆಯಿಂದ ಅಮಾನತುಗೊಳಿಸಿ ಆದೇಶ ಹೊರಡಿಸಲಾಗಿದೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಐವರು ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಗಳು, 7 ಸಹಾಯಕ ಇಂಜಿನಿಯರ್ ಗಳು, 15 ಜೂನಿಯರ್ ಇಂಜಿನಿಯರ್ ಗಳನ್ನು ಅಮಾನತು ಮಾಡಲಾಗಿದೆ. ಕರ್ನಾಟಕ ನಾಗರೀಕ ಸೇವಾ ನಿಯಮಗಳ ಅನ್ವಯ ಈ ಎಲ್ಲಾ ಅಧಿಕಾರಿಗಳನ್ನು ಇಲಾಖಾ ವಿಚಾರಣೆಗೆ ಕಾಯ್ದಿರಿಸಿ ಮುಂದಿನ ಆದೇಶದವರೆಗೆ ಅಮಾನತು ಮಾಡಲಾಗಿದೆ. ಅಮಾನತು ಮಾಡಲಾದ ಅಧಿಕಾರಿಗಳನ್ನು ತಕ್ಷಣವೇ ಸೇವೆಯಿಂದ ಬಿಡುಗಡೆ ಮಾಡಬೇಕೆಂದು ಸೂಚನೆ ನೀಡಲಾಗಿದೆ.