ಬೆಂಗಳೂರು: 300 ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆಯಿಂದ ಒಪ್ಪಿಗೆ ದೊರೆತಿದೆ.
ವಿವಿಧೆಡೆ ಖಾಲಿ ಇರುವ 300 ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ಕುರಿತಂತೆ ಸಲ್ಲಿಸಲಾಗಿದ್ದ ಪ್ರಸ್ತಾವನೆಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ದೊರೆತಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.
2021ರ ಕರ್ನಾಟಕ ಕೃಷಿ ಸೇವೆಗಳು(ವೃಂದ ಮತ್ತು ನೇಮಕಾತಿ) ನಿಯಮಗಳಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆಯ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತದೆ. 300 ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಶೇ 85 ರಷ್ಟು ಕೃಷಿ ಪದವೀಧರರು, ಶೇಕಡ 15 ರಷ್ಟು ಹುದ್ದೆಗಳಿಗೆ ಬಿಟೆಟ್, ಕೃಷಿ ಇಂಜಿನಿಯರಿಂಗ್ ಅಥವಾ ಬಯೋಟೆಕ್ನಾಲಜಿ ಪದವೀಧರರು ಅರ್ಹರಾಗಿರುತ್ತಾರೆ.