alex Certify ಶುಭ ಸುದ್ದಿ: 300 ಸಹಾಯಕ ಕೃಷಿ ಅಧಿಕಾರಿಗಳ ನೇಮಕಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಶುಭ ಸುದ್ದಿ: 300 ಸಹಾಯಕ ಕೃಷಿ ಅಧಿಕಾರಿಗಳ ನೇಮಕಾತಿ

ಬೆಂಗಳೂರು: 300 ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳಿಗೆ ನೇರ ನೇಮಕಾತಿ ಮಾಡಿಕೊಳ್ಳಲು ಆರ್ಥಿಕ ಇಲಾಖೆಯಿಂದ ಒಪ್ಪಿಗೆ ದೊರೆತಿದೆ.

ವಿವಿಧೆಡೆ ಖಾಲಿ ಇರುವ 300 ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ಕುರಿತಂತೆ ಸಲ್ಲಿಸಲಾಗಿದ್ದ ಪ್ರಸ್ತಾವನೆಗೆ ಆರ್ಥಿಕ ಇಲಾಖೆಯಿಂದ ಒಪ್ಪಿಗೆ ದೊರೆತಿದೆ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ಹೇಳಿದ್ದಾರೆ.

2021ರ ಕರ್ನಾಟಕ ಕೃಷಿ ಸೇವೆಗಳು(ವೃಂದ ಮತ್ತು ನೇಮಕಾತಿ) ನಿಯಮಗಳಲ್ಲಿ ನಿಗದಿಪಡಿಸಿದ ವಿದ್ಯಾರ್ಹತೆಯ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುತ್ತದೆ. 300 ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳಿಗೆ ಶೇ 85 ರಷ್ಟು ಕೃಷಿ ಪದವೀಧರರು, ಶೇಕಡ 15 ರಷ್ಟು  ಹುದ್ದೆಗಳಿಗೆ ಬಿಟೆಟ್, ಕೃಷಿ ಇಂಜಿನಿಯರಿಂಗ್ ಅಥವಾ ಬಯೋಟೆಕ್ನಾಲಜಿ ಪದವೀಧರರು ಅರ್ಹರಾಗಿರುತ್ತಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...