ಬೆಂಗಳೂರು: ಸರ್ಕಾರದ ವಿರುದ್ಧ ನಕಾರಾತ್ಮಕ ಅಭಿಪ್ರಾಯ ವ್ಯಕ್ತಪಡಿಸುವ ಅಧಿಕಾರಿಗಳಿಗೆ ಕಟ್ಟಪ್ಪಣೆ ಹೊರಡಿಸಲಾಗಿದೆ. ಅಧಿಕಾರಿಗಳು ಸುದ್ದಿಗೋಷ್ಠಿ ನಡೆಸಿ ಅನಪೇಕ್ಷಿತ ಹೇಳಿಕೆ ನೀಡುವಂತಿಲ್ಲ. ಕೆಲವು ಅಧಿಕಾರಿಗಳು ಪತ್ರಿಕಾ ಪ್ರಕಟಣೆಯ ಮೂಲಕ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಸರ್ಕಾರಿ ಅಧಿಕಾರಿಗಳು ಪತ್ರಿಕಾಗೋಷ್ಠಿಯ ಪತ್ರಿಕಾ ಪ್ರಕಟಣೆಗಳು ಮೂಲಕ ಅನಪೇಕ್ಷಿತ ಹೇಳಿಕೆಗಳನ್ನು ನೀಡದಂತೆ ಸೂಚಿಸಿದೆ.
ಈ ಬಗ್ಗೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅಧಿಕೃತ ಸುತ್ತೋಲೆ ಹೊರಡಿಸಿದ್ದಾರೆ. ಅಧಿಕಾರಿಗಳು ಅನಪೇಕ್ಷಿತ ಹೇಳಿಕೆ ನೀಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದ್ದು, ಇದು ಸರ್ಕಾರದ ಆಡಳಿತ ವ್ಯವಸ್ಥೆಯ ಮೇಲೆ ದುಷ್ಪರಿಣಾಮ ಬೀರುತ್ತದೆ. ಮತ್ತು ಮುಜುಗರ ಉಂಟುಮಾಡುತ್ತದೆ. ಹೀಗಾಗಿ, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಅಧಿಕೃತ ಕರ್ತವ್ಯ ನಿರ್ವಹಿಸುವುದನ್ನು ಹೊರತಾಗಿ ಪತ್ರಿಕಾ ಪ್ರಕಟಣೆ ಅಥವಾ ಪತ್ರಿಕಾಗೋಷ್ಠಿ ನಡೆಸಿ ಅನಪೇಕ್ಷಿತ ಹೇಳಿಕೆ ನೀಡುವುದನ್ನು ನಿಷೇಧಿಸಲಾಗಿದೆ ಎಂದು ಹೇಳಲಾಗಿದೆ.