
ಬೆಂಗಳೂರು: ಕರ್ತವ್ಯಲೋಪದಿಂದ ಸರ್ಕಾರಕ್ಕೆ ಕೋಟ್ಯಂತರ ರೂಪಾಯಿ ನಷ್ಟವೆಸಗಿದ್ದ ಇಬ್ಬರು ಅಧಿಕಾರಿಗಳನ್ನು ಸಸ್ಪೆಂಡ್ ಮಾಡಲಾಗಿದೆ.
ಕರ್ತವ್ಯ ಲೋಪದ ಆರೋಪ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಗಳ ವಿರುದ್ಧ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಕ್ರಮ ಕೈಗೊಂಡಿದ್ದಾರೆ. ಸುಮಾರು 2.76 ಕೋಟಿ ರೂಪಾಯಿ ನಷ್ಟವೆಸಗಿದ್ದ ತುಮಕೂರಿನ ಗ್ರಾಮೀಣ ಅಭಿವೃದ್ಧಿ ಇಲಾಖೆ ಕಾರ್ಯಪಾಲಕ ಇಂಜಿನಿಯರ್ ಎಸ್.ಆರ್. ಹರೀಶ್ ಅವರನ್ನು ಅಮಾನತು ಮಾಡಲಾಗಿದೆ.
ವಿಳಂಬ ಧೋರಣೆ, ಬೇಜವಾಬ್ದಾರಿತನ, ಕರ್ತವ್ಯ ಲೋಪದಿಂದ 41 ವಿವಿಧ ಕಾಮಗಾರಿಗಳಲ್ಲಿ 1.3 ಕೋಟಿ ರೂ. ನಷ್ಟವೆಸಗಿದ್ದ ಯಾದಗಿರಿ ಗ್ರಾಮೀಣಾಭಿವೃದ್ಧಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಬಸವರಾಜ ಅವರನ್ನು ಅಮಾನತು ಮಾಡಲಾಗಿದೆ ಎಂದು ಹೇಳಲಾಗಿದೆ.