ಬೆಂಗಳೂರು: ಇಬ್ಬರು ಬಿಬಿಎಂಪಿ ಅಧಿಕಾರಿಗಳು ಮತ್ತು ಮಧ್ಯವರ್ತಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಬಿಬಿಎಂಪಿ ಬೊಮ್ಮನಹಳ್ಳಿ ವಲಯದ ಟೌನ್ ಪ್ಲಾನಿಂಗ್ ಎಡಿ ಪಟ್ಟಣಶೆಟ್ಟಿ, ಕಚೇರಿ ಎಫ್.ಡಿ.ಎ. ಕೃಷ್ಣ, ಮದ್ಯವರ್ತಿ ರವಿ ಲೋಕಾಯುಕ್ತ ಬಲೆಗೆ ಬಿದ್ದವರು ಎಂದು ಹೇಳಲಾಗಿದೆ.
ವಾಣಿಜ್ಯ ಸಂಕೀರ್ಣಕ್ಕೆ ಒಸಿ ನೀಡಲು 26 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಬೆಂಗಳೂರಿನ ಹೆಚ್ಎಸ್ಆರ್ ಲೇಔಟ್ ನಲ್ಲಿ ವಾಣಿಜ್ಯ ಸಂಕೀರ್ಣ ನಿರ್ಮಾಣವಾಗಿದ್ದು, ಒಸಿ ನೀಡಲು ಸರ್ಕಾರಿ ಶುಲ್ಕದಲ್ಲಿ ಕಡಿಮೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 26 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಅಧಿಕಾರಿಗಳು ಮಾತುಕತೆ ನಂತರ 3 ಲಕ್ಷ ರೂಪಾಯಿ ಲಂಚಕ್ಕೆ ಒಪ್ಪಿಕೊಂಡಿದ್ದರು.
ಮುಂಗಡವಾಗಿ 96,500 ರೂ. ಸ್ವೀಕರಿಸಿದ್ದರು 2 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕಿರಣ್ ಕುಮಾರ್ ಅವರಿಂದ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.